ತಾಯಿ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಬೇಡಿ: ವಿರಾಟ್‌ ಕೊಹ್ಲಿ ಸಹೋದರ

| Published : Feb 01 2024, 02:02 AM IST

ತಾಯಿ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಬೇಡಿ: ವಿರಾಟ್‌ ಕೊಹ್ಲಿ ಸಹೋದರ
Share this Article
  • FB
  • TW
  • Linkdin
  • Email

ಸಾರಾಂಶ

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲೆರಡು ಟೆಸ್ಟ್‌ಗೆ ಭಾರತ ತಂಡದ ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿ ಗೈರಾಗಲು ಅವರ ತಾಯಿ ಅನಾರೋಗ್ಯಕ್ಕೀಡಾಗಿದ್ದೇ ಕಾರಣ ಎಂಬ ವದಂತಿಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ನವದೆಹಲಿ: ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲೆರಡು ಟೆಸ್ಟ್‌ಗೆ ಭಾರತ ತಂಡದ ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿ ಗೈರಾಗಲು ಅವರ ತಾಯಿ ಅನಾರೋಗ್ಯಕ್ಕೀಡಾಗಿದ್ದೇ ಕಾರಣ ಎಂಬ ವದಂತಿಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ವಿರಾಟ್‌ ಸಹೋದರ ವಿಕಾಸ್‌ ಕೊಹ್ಲಿ, ‘ಅಮ್ಮನ ಅನಾರೋಗ್ಯದ ಕುರಿತು ಹರಿದಾಡುತ್ತಿರುವ ಸುದ್ದಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ. ಸರಿಯಾಗಿ ತಿಳಿದುಕೊಳ್ಳದೆ ಇಂತಹ ಮಾಹಿತಿಗಳನ್ನು ಹರಡಬೇಡಿ’ ವಿನಂತಿ ಮಾಡಿದ್ದಾರೆ. 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ 28 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಹಲವರು ವಿರಾಟ್‌ ಕೊಹ್ಲಿ ಅನುಪಸ್ಥಿತಿ ಕುರಿತು ಮಾತನಾಡಿದ್ದರು. ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕೆಲ್‌ ವಾನ್‌ ಕೂಡಾ ವಿರಾಟ್‌ ಕೊಹ್ಲಿ ನಾಯಕನಾಗಿದ್ದರೆ ಹೈದ್ರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಸೋಲುತ್ತಿರಲಿಲ್ಲ ಎಂದಿದ್ದರು. ಶುಕ್ರವಾರದಿಂದ ಎರಡನೇ ಟೆಸ್ಟ್‌ ಪಂದ್ಯವು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗಲಿದೆ.