ಸಾರಾಂಶ
ಪ್ರತಿ ವರ್ಷದಂತೆ ಈ ವರ್ಷವೂ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಭಿಮಾನಿಗಳು ಆಚರಿಸಿದರು
ಪ್ರತಿ ವರ್ಷದಂತೆ ಈ ವರ್ಷವೂ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಭಿಮಾನಿಗಳು ಆಚರಿಸಿದರು. ಡಾ. ವಿಷ್ಣು ಸೇನಾ ಸಮಿತಿಯು ಅಭಿಮಾನ್ ಸ್ಟುಡಿಯೋ ಸಮೀಪದಲ್ಲಿರುವ ಜೆಎಸ್‌ಎಸ್ ಮಹಾವಿದ್ಯಾಪೀಠದ ಎದುರಿನ ಜಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮ ಆಯೋಜಿಸಿತ್ತು.
ಅಲ್ಲಿ ತಾತ್ಕಾಲಿಕವಾದ ಮಂಟಪ ನಿರ್ಮಿಸಿ, ಮಂಟಪದಲ್ಲಿ ಡಾ. ವಿಷ್ಣುವರ್ಧನ್ ಅವರ ಭಾವಚಿತ್ರ ಹಾಗೂ ಪುತ್ಥಳಿಗೆ ಪೂಜೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ ನೂರಾರು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಇದೇ ಸಂದರ್ಭ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಹಲವರು ಪಾಲ್ಗೊಂಡು ರಕ್ತದಾನ ಮಾಡಿದರು. ಕೆಲವರು ನೇತ್ರದಾನಕ್ಕೂ ತಮ್ಮ ಹೆಸರುಗಳು ನೋಂದಣಿ ಮಾಡಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನ ಆಚರಿಸಿದರು.