ಸಾರಾಂಶ
ಐಸಿಸಿ ಸಭೆಗಳಿಗೆ ಭಾರತೀಯ ಪ್ರತಿನಿಧಿಗಳ ಆಯ್ಕೆ ಸೇರಿ 18 ಅಂಶಗಳ ಬಗ್ಗೆ ಚರ್ಚಿಸಿ ನಿರ್ಧಾರ. ಬಿಸಿಸಿಐನ ನೂತನ ಕಾರ್ಯದರ್ಶಿ ಯಾರು ಎನ್ನುವ ಅಂಶದ ಬಗ್ಗೆ ಚರ್ಚೆ ಅಜೆಂಡಾದಲ್ಲಿ ಇಲ್ಲ.
ಬೆಂಗಳೂರು: ಬಿಸಿಸಿಐನ 93ನೇ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಇಲ್ಲಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ನಡೆಯಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸಭೆಗಳಲ್ಲಿ ಬಿಸಿಸಿಐ ಪ್ರತಿನಿಧಿಗಳಾಗಿ ಪಾಲ್ಗೊಳ್ಳಲು ಇಬ್ಬರು ಸದಸ್ಯರ ಆಯ್ಕೆ ಸೇರಿ ಒಟ್ಟು 18 ವಿಷಯಗಳನ್ನು ಚರ್ಚೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಆದರೆ, ಜಯ್ ಶಾ ಅವರಿಂದ ತೆರವಾಗಲಿರುವ ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ವಿಷಯದ ಚರ್ಚೆ ಅಜೆಂಡಾದಲ್ಲಿ ಇಲ್ಲ ಎಂದು ತಿಳಿದುಬಂದಿದೆ.
ಈ ವರೆಗೂ, ಐಸಿಸಿ ಸಭೆಗಳಲ್ಲಿ ಜಯ್ ಶಾ ಬಿಸಿಸಿಐ ಅನ್ನು ಪ್ರತಿನಿಧಿಸುತ್ತಿದ್ದರು. ಅವರೀಗ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾರಣ, ಹೊಸಬರನ್ನು ಆಯ್ಕೆ ಮಾಡಬೇಕಿದೆ.