ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ

| Published : Mar 26 2024, 01:24 AM IST / Updated: Mar 26 2024, 01:13 PM IST

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಸೋಮವಾರದ ಪಂದ್ಯದ ವೇಳೆ ಅಭಿಮಾನಿಯೋರ್ವ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದ ಪ್ರಸಂಗ ಜರುಗಿತು.

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಸೋಮವಾರದ ಪಂದ್ಯದ ವೇಳೆ ಅಭಿಮಾನಿಯೋರ್ವ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದ ಪ್ರಸಂಗ ಜರುಗಿತು. 

ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ಆರಂಭಿಸಲು ಸಿದ್ಧತೆ ನಡೆಸುತ್ತಿತ್ತು. ಈ ವೇಳೆ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಇದೇ ಸಂದರ್ಭ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಪಿಚ್‌ ಕಡೆ ಬಂದ ಅಭಿಮಾನಿಯೋರ್ವ ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದಾನೆ. 

ಕೂಡಲೇ ಭದ್ರತಾ ಸಿಬ್ಬಂದಿ ಆಗಮಿಸಿ ಆತನನ್ನು ಮೈದಾನದಿಂದ ಹೊರಹಾಕಿದ್ದಾರೆ. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ.

ಇಂದಿನಿಂದ ಸ್ಪೇನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ

ಮ್ಯಾಡ್ರಿಡ್‌: ಸ್ಪೇನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ ಮಂಗಳವಾರ ಆರಂಭಗೊಳ್ಳಲಿದ್ದು, ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು, ಕಿದಂಬಿ ಶ್ರೀಕಾಂತ್ ಸೇರಿದಂತೆ ಪ್ರಮುಖರು ಕಣಕ್ಕಿಳಿಯಲಿದ್ದಾರೆ. 

ಸಿಂಧು ಕಳೆದ ವರ್ಷ ಫೈನಲ್‌ಗೇರಿದ್ದು, ಈ ಬಾರಿ ಪ್ರಶಸ್ತಿ ನಿರೀಕ್ಷೆಯಲ್ಲಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಕಿರಣ್‌ ಜಾರ್ಜ್‌, ಸತೀಶ್‌ ಕರುಣಾಕರನ್‌ ಕೂಡಾ ಆಡಲಿದ್ದಾರೆ. ಆದರೆ ಲಕ್ಷ್ಯ ಸೇನ್‌ ಟೂರ್ನಿಯಿಂದ ಹಿಂದಕ್ಕೆ ಸರಿದಿದ್ದಾರೆ. 

ಮಹಿಳಾ ಸಿಂಗಲ್ಸ್‌ನಲ್ಲಿ ಅಶ್ಮಿತಾ, ಮಾಳವಿಕಾ ಬನ್ಸೋದ್‌, ಮಹಿಳಾ ಡಬಲ್ಸ್‌ನಲ್ಲಿ ತ್ರೀಸಾ-ಗಾಯತ್ರಿ, ಅಶ್ವಿನಿ ಪೊನ್ನಪ್ಪ-ತನಿಶಾ, ಅಶ್ವಿನಿ ಭಟ್‌-ಶಿಖಾ ಗೌತಮ್, ಪುರುಷರ ಡಬಲ್ಸ್‌ನಲ್ಲಿ ಕೃಷ್ಣ ಪ್ರಸಾದ್‌-ಸಾಯಿ ಪ್ರತೀಕ, ಅರ್ಜುನ್‌-ಧ್ರುವ್‌ ಕಪಿಲ್‌ ಕಣಕ್ಕಿಳಿಯಲಿದ್ದಾರೆ.