ಸಾರಾಂಶ
ದೇಶದ ಮೊಟ್ಟ ಮೊದಲ ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ ಶುಕ್ರವಾರ ಉದ್ಘಾಟನೆಗೊಂಡಿದ್ದು, ನಗರದ ಹೊರವಲಯದಲ್ಲಿರುವ ಟಾಪ್‌ಸ್ಪಿನ್ ಅಕಾಡೆಮಿಯ 12 ಕೋರ್ಟ್‌ಗಳಲ್ಲಿ ಮೊದಲ ದಿನವೇ 250 ಮಂದಿ ಆಟಗಾರರು ಸ್ಪರ್ಧಿಸಿದ್ದಾರೆ.
ಬೆಂಗಳೂರು: ದೇಶದ ಮೊಟ್ಟ ಮೊದಲ ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ ಶುಕ್ರವಾರ ಉದ್ಘಾಟನೆಗೊಂಡಿದ್ದು, ನಗರದ ಹೊರವಲಯದಲ್ಲಿರುವ ಟಾಪ್‌ಸ್ಪಿನ್ ಅಕಾಡೆಮಿಯ 12 ಕೋರ್ಟ್‌ಗಳಲ್ಲಿ ಮೊದಲ ದಿನವೇ 250 ಮಂದಿ ಆಟಗಾರರು ಸ್ಪರ್ಧಿಸಿದ್ದಾರೆ.
9 ರಾಜ್ಯಗಳ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು
ಸ್ಪರ್ಧೆ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಅಸೋಸಿಯೇಷನ್ ಅಧ್ಯಕ್ಷ ಎ.ಜಿ.ಶಿವಕುಮಾರ್, ಉಪಾಧ್ಯಕ್ಷರಾದ ಶ್ರೀನಿವಾಸ್‌ಗೌಡ, ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಷನ್ ಅಧ್ಯಕ್ಷ ಅರವಿಂದ ಪ್ರಭುಜಿ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಒಟ್ಟು 9 ರಾಜ್ಯಗಳ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
ನಿರ್ಮಾಪಕರಾದ ಇ.ಕೃಷ್ಣಪ್ಪ ಅವರಿಂದ ಉದ್ಘಾಟನೆ
ನಿರ್ಮಾಪಕರಾದ ಇ.ಕೃಷ್ಣಪ್ಪ ಅವರಿಂದ ಉದ್ಘಾಟನೆಯಾದ ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್, ನವೆಂಬರ್ 23ರವರೆಗೂ ನಡೆಯಲಿದ್ದು, ಒಟ್ಟು 730 ಮಂದಿ ಸ್ಪರ್ಧಿಸಲಿದ್ದಾರೆ. ಈ ವೇಳೆ ಮಾತಾಡಿದ ಪ್ರಧಾನ ಕಾರ್ಯದರ್ಶಿ ರಜತ್ ಕಾಂಕರ್ ‘ಈ ಸ್ಪರ್ಧೆಯಲ್ಲಿ ದೇಶದ ಎಲ್ಲಾ ರಾಜ್ಯಗಳಿಂದಲೂ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಫೈನಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
)

;Resize=(128,128))
;Resize=(128,128))