ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ಶುಭಾರಂಭ

| Published : Mar 07 2024, 01:50 AM IST

ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ಶುಭಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ತಾರಾ ಶಟ್ಲರ್‌ ಎಚ್‌.ಎಸ್‌.ಪ್ರಣಯ್‌ ಟೂರ್ನಿಯಲ್ಲಿ ಪದಕ ಗೆಲ್ಲುವ ಫೇವರಿಟ್‌ ಎನಿಸಿಕೊಂಡಿದ್ದರು. ಆದರೆ ಅವರು ಆರಂಭಿಕ ಸುತ್ತಲ್ಲೇ ಸೋತು ಹೊರಬಿದ್ದಿದ್ದಾರೆ.

ಪ್ಯಾರಿಸ್: ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್‌ ಫ್ರೆಂಚ್‌ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ 2ನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಆದರೆ ಪದಕ ನಿರೀಕ್ಷೆಯಲ್ಲಿದ್ದ ಎಚ್‌.ಎಸ್‌.ಪ್ರಣಯ್‌ ಆರಂಭಿಕ ಸುತ್ತಲ್ಲೇ ಸೋತು ಹೊರಬಿದ್ದಿದ್ದಾರೆ.ಬುಧವಾರ ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸಿಂಧು ಅವರು ಕೆನಡಾದ ಮಿಚೆಲ್ಲೆ ಲಿ ವಿರುದ್ಧ 20-22, 22-20, 21-19 ಗೇಮ್‌ಗಳಲ್ಲಿ ರೋಚಕ ಗೆಲುವು ಸಾಧಿಸಿದರು. ಪುರುಷರ ಸಿಂಗಲ್ಸ್‌ನಲ್ಲಿ ಮಾಜಿ ವಿಶ್ವ ನಂ.1 ಶ್ರೀಕಾಂತ್‌, ಚೈನೀಸ್‌ ತೈಪೆಯ ಚೊಯು ಟೀನ್‌ ಚೆನ್‌ ವಿರುದ್ಧ 21-15, 20-22, 21-8ರಲ್ಲಿ ಜಯಗಳಿಸಿದರು. ಪ್ರಣಯ್‌ ಚೀನಾದ ಲು ಗುವಾಂಗ್‌ ಜು ವಿರುದ್ಧ 17-21, 17-21ರಲ್ಲಿ ಸೋಲನುಭವಿಸಿದರು.

ಲಂಕಾ ವಿರುದ್ಧ ಬಾಂಗ್ಲಾಕ್ಕೆ 8 ವಿಕೆಟ್‌ ಜಯ

ಸೈಲೆಟ್‌(ಬಾಂಗ್ಲಾದೇಶ): ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ 8 ವಿಕೆಟ್‌ ಗೆಲುವು ಸಾಧಿಸಿದ್ದು, 3 ಪಂದ್ಯಗಳ ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿದೆ. ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ 5 ವಿಕೆಟ್‌ ಕಳೆದುಕೊಂಡು 165 ರನ್‌ ಕಲೆಹಾಕಿತು. ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ 18.1 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟದಲ್ಲಿ ಗೆಲುವು ತನ್ನದಾಗಿಸಿಕೊಂಡಿತು. ನಾಯಕ ನಜ್ಮುಲ್‌ ಹೊಸೈನ್‌ ಔಟಾಗದೆ 53, ಲಿಟನ್ ದಾಸ್‌ 36, ತೌಹೀದ್‌ ಔಟಾಗದೆ 32 ರನ್‌ ಗಳಿಸಿದರು.