14 ಬಾರಿ ಚಾಂಪಿಯನ್‌ ರಾಫೆಲ್‌ ನಡಾಲ್‌ ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದೆ. ಅವರು ಮೊದಲ ಸುತ್ತಿನಲ್ಲಿ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಮೇ 26ರಂದು ಆರಂಭಗೊಳ್ಳಲಿರುವ ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯ ಡ್ರಾ ಗುರುವಾರ ಬಿಡುಗಡೆಗೊಂಡಿದ್ದು, ಭಾರತದ ಅಗ್ರ ಟೆನಿಸಿಗ ಸುಮಿತ್‌ ಅವರು ಮೊದಲ ಸುತ್ತಿನಲ್ಲಿ ರಷ್ಯಾದ ಕರೆನ್‌ ಕಚನೊವ್‌ ವಿರುದ್ಧ ಸೆಣಸಾಡಲಿದ್ದಾರೆ.

 ವಿಶ್ವ ನಂ.97 ನಗಾಲ್‌ ಮೊದಲ ಬಾರಿ ಫ್ರೆಂಚ್‌ ಓಪನ್‌ ಪ್ರಧಾನ ಸುತ್ತಿನಲ್ಲಿ ಆಡಲಿದ್ದಾರೆ. ಕಚನೊವ್ 2 ಬಾರಿ ಫ್ರೆಂಚ್‌ ಓಪನ್‌ ಕ್ವಾರ್ಟರ್‌ ಫೈನಲ್‌ಗೇರಿದ್ದು, ಸದ್ಯ ವಿಶ್ವ ರ್‍ಯಾಂಕಿಂಗ್‌ನಲ್ಲಿ 18ನೇ ಸ್ಥಾನದಲ್ಲಿದ್ದಾರೆ.

ಇದೇ ವೇಳೆ 14 ಬಾರಿ ಚಾಂಪಿಯನ್‌ ರಾಫೆಲ್‌ ನಡಾಲ್‌ ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಮೊದಲ ಸುತ್ತಿನಲ್ಲಿ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಜ್ವೆರೆವ್ ಟೂರ್ನಿಯಲ್ಲಿ 3 ಬಾರಿ ಸೆಮಿಫೈನಲ್‌ ಪ್ರವೇಶಿಸಿದ್ದು, ಈ ಬಾರಿ ನಡಾಲ್‌ಗೆ ಮೊದಲ ಸುತ್ತಲ್ಲೇ ಪ್ರಬಲ ಪೈಪೋಟಿ ಎದುರಾಗಲಿದೆ. ಇದೇ ವೇಳೆ ಹಾಲಿ ಚಾಂಪಿಯನ್‌ ನೋವಾಕ್‌ ಜೋಕೋವಿಚ್‌ ಆರಂಭಿಕ ಸುತ್ತಿನಲ್ಲಿ ಫ್ರಾನ್ಸ್‌ನ ಹೆರ್ಬರ್ಟ್‌ ವಿರುದ್ಧ ಆಡಲಿದ್ದಾರೆ.

ಸಿಂಧು ಜರ್ಮನಿ, ಸೇನ್‌ ಫ್ರಾನ್ಸ್‌ನಲ್ಲಿ ಅಭ್ಯಾಸ

ನವದೆಹಲಿ: ಭಾರತದ ತಾರಾ ಶಟ್ಲರ್‌ಗಳಾದ ಲಕ್ಷ್ಯ ಸೇನ್‌ ಹಾಗೂ ಪಿ.ವಿ.ಸಿಂಧು ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ ಕ್ರಮವಾಗಿ ಫ್ರಾನ್ಸ್‌ ಹಾಗೂ ಜರ್ಮನಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ. ಇಬ್ಬರ ತರಬೇತಿಯನ್ನೂ ಕೇಂದ್ರ ಕ್ರೀಡಾ ಸಚಿವಾಲಯದ ಮಿಷನ್‌ ಒಲಿಂಪಿಕ್‌ ಸೆಲ್‌ ಅನುಮೋದಿಸಿದ್ದು, ಹಣಕಾಸಿನ ನೆರವನ್ನೂ ಒದಗಿಸಲಿದೆ. ಸೇನ್‌ ಜು.8ರಿಂದ 21ರ ವರೆಗೆ ಮಾರ್ಸೆ ನಗರದಲ್ಲಿ ತರಬೇತಿಯಲ್ಲಿ ತೊಡಗಿಸಿಕೊಳ್ಳಲಿದ್ದು, ಸಿಂಧು ಒಂದು ತಿಂಗಳ ಕಾಲ ಜರ್ಮನಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ.