ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾವಿವಿ ಸ್ಥಾಪನೆಗೆ ಚಿಂತನೆ:ಸಚಿವ ಡಾ। ಸುಧಾಕರ್‌

| Published : Dec 17 2023, 01:45 AM IST / Updated: Dec 17 2023, 01:46 AM IST

ಸಾರಾಂಶ

ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕ್ರೀಡಾ ಸಚಿವ ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ನಮ್ಮ ದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಆದ್ದರಿಂದ ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಯ ಚಿಂತನೆ ಸರ್ಕಾರದ ಮುಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌ ಹೇಳಿದರು. ಮಂಗಳೂರು ವಿವಿಯಲ್ಲಿ ನಡೆದ ಅಂತರ್‌ ವಿಶ್ವವಿದ್ಯಾಲಯ ಕಬ್ಬಡ್ಡಿ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದುಕೊಂಡ ಮಂಗಳೂರು ವಿವಿ ತಂಡದ ಸದಸ್ಯರನ್ನು ಶನಿವಾರ ಸನ್ಮಾನಿಸಿ ಅವರು ಮಾತನಾಡಿದರು.

+++

, ವಿಶ್ವವಿದ್ಯಾಲಯಗಳು ಪ್ರಸ್ತುತ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಇದರೊಂದಿಗೆ ಕ್ರೀಡಾ ಸ್ಪೂರ್ತಿ ಬೆಳೆಸುವ ಕೆಲಸವಾಗಬೇಕಾಗಿದೆ. ಶಿಕ್ಷಕ ವೃತ್ತಿ ಎನ್ನುವುದು ಅತ್ಯಂತ ಪವಿತ್ರವಾದ್ದು. ಉತ್ತಮ ಶಿಕ್ಷಣ ಕೊಟ್ಟು ಮೌಲ್ಯಾಧಾರಿತ ವ್ಯಕ್ತಿಯನ್ನು ರೂಪಿಸುವ ಜವಾಬ್ದಾರಿಯೂ ಅವರ ಮೇಲಿದೆ ಎಂದರು.