ಸಾರಾಂಶ
ಮುಂಬೈ: ಪಟ್ಟು ಹಿಡಿದು ಮುಂಬೈ ಇಂಡಿಯನ್ಸ್ ನಾಯಕತ್ವ ಪಡೆಯಲು ಯಶಸ್ವಿಯಾಗಿರುವ ಹಾರ್ದಿಕ್ ಪಾಂಡ್ಯ 2024ರ ಐಪಿಎಲ್‌ನಿಂದಲೇ ಹೊರಬೀಳುವ ಸಾಧ್ಯತೆ ಇದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾರ್ದಿಕ್ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲಿನ ಗಾಯಕ್ಕೆ ತುತ್ತಾಗಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಈಗಾಗಲೇ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹಾರ್ದಿಕ್ ಗೈರಾಗಿದ್ದು, ಜನವರಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ಸರಣಿಯಲ್ಲೂ ಕಣಕ್ಕಿಳಿಯುವುದು ಅನುಮಾನ. ಅವರು ಸಂಪೂರ್ಣ ಚೇತರಿಸಿಕೊಳ್ಳಲು ಇನ್ನೂ ಕೆಲ ತಿಂಗಳು ಬೇಕಾಗಬಹುದು ಎನ್ನಲಾಗುತ್ತಿದೆ. ಹೀಗಾಗಿ ಐಪಿಎಲ್‌ಗೂ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.-ಮತ್ತೆ ರೋಹಿತ್ ನಾಯಕ?ಒಂದು ವೇಳೆ ಹಾರ್ದಿಕ್ ಐಪಿಎಲ್‌ನಿಂದ ಹೊರಬಿದ್ದರೆ ಮುಂಬೈ ತಂಡವನ್ನು ಮತ್ತೆ ರೋಹಿತ್ ಶರ್ಮಾ ಮುನ್ನಡೆಸಬೇಕಾಗಬಹುದು. ರೋಹಿತ್ 2013ರಿಂದಲೂ ಮುಂಬೈಗೆ ನಾಯಕರಾಗಿದ್ದು, ಇತ್ತೀಚೆಗಷ್ಟೇ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್‌ಗೆ ಹೊಣೆಗಾರಿಕೆ ನೀಡಲಾಗಿತ್ತು.