ಐಸಿಸಿ ಟೆಸ್ಟ್‌ ಬೌಲರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಮೂವರು ಬೌಲರ್‌ಗಳು ಅಗ್ರ-10ರಲ್ಲಿ ಸ್ಥಾನ ಪಡೆದಿದ್ದು, ಆರ್‌.ಅಶ್ವಿನ್‌ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ದುಬೈ: ಐಸಿಸಿ ಟೆಸ್ಟ್‌ ಬೌಲರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಮೂವರು ಬೌಲರ್‌ಗಳು ಅಗ್ರ-10ರಲ್ಲಿ ಸ್ಥಾನ ಪಡೆದಿದ್ದು, ಆರ್‌.ಅಶ್ವಿನ್‌ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.ಬುಧವಾರ ಪ್ರಕಟಗೊಂಡ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಶ್ವಿನ್‌ 853 ರೇಟಿಂಗ್‌ ಅಂಕಗಳನ್ನು ಪಡೆದುಕೊಂಡಿದ್ದಾರೆ. ಇನ್ನು, ಜಸ್‌ಪ್ರೀತ್‌ ಬೂಮ್ರಾ ಒಂದು ಸ್ಥಾನ ಏರಿಕೆ ಕಂಡು 4ನೇ ಸ್ಥಾನಕ್ಕೇರಿದ್ದು, ರವೀಂದ್ರ ಜಡೇಜಾ 6ನೇ ಸ್ಥಾನದಲ್ಲಿದ್ದಾರೆ.

ಇದೇ ವೇಳೆ ಬ್ಯಾಟಿಂಗ್‌ ವಿಭಾಗದಲ್ಲಿ ವಿರಾಟ್‌ ಕೊಹ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆದ ಏಕೈಕ ಭಾರತಿಯ ಎನಿಸಿಕೊಂಡಿದ್ದಾರೆ. ಸದ್ಯ ವಿರಾಟ್‌ 6ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್‌ ವಿಭಾಗದಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ಆರ್‌.ಅಶ್ವಿನ್‌ 2ನೇ ಸ್ಥಾನದಲ್ಲಿದ್ದು, ಅಕ್ಷರ್‌ ಪಟೇಲ್‌ 1 ಸ್ಥಾನ ಕುಸಿತ ಕಂಡು 6ನೇ ಸ್ಥಾನದಲ್ಲಿದ್ದಾರೆ.