ಮಹಿಳಾ ಕ್ರಿಕೆಟ್‌: ಭಾರತ vs ದ.ಆಫ್ರಿಕಾ 2ನೇ ಏಕದಿನ ಇಂದು

| Published : Jun 19 2024, 01:01 AM IST

ಸಾರಾಂಶ

ಇಂದು ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ 2ನೇ ಏಕದಿನ ಪಂದ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಹರ್ಮನ್‌ಪ್ರೀತ್‌ ಕೌರ್‌ ಪಡೆ. ಮತ್ತೊಂದು ಶತಕ ಸಿಡಿಸ್ತಾರಾ ಸ್ಮೃತಿ ಮಂಧನಾ?.

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು 143 ರನ್‌ಗಳಿಂದ ಗೆದ್ದುಕೊಂಡಿದ್ದ ಭಾರತ, 2ನೇ ಪಂದ್ಯದಲ್ಲೂ ಜಯಭೇರಿ ಬಾರಿಸಿ 1 ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಸಂಘಟಿತ ಪ್ರದರ್ಶನ ಮೂಡಿಬಂದಿತ್ತು. ಹರ್ಮನ್‌ಪ್ರೀತ್‌ ಕೌರ್‌ ಪಡೆ ತನ್ನ ಪ್ರದರ್ಶನ ಗುಣಮಟ್ಟವನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಬುಧವಾರ ಬೆಂಗಳೂರಲ್ಲಿ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ.ಪಂದ್ಯ: ಮಧ್ಯಾಹ್ನ 1.30ಕ್ಕೆ, ನೇರ ಪ್ರಸಾರ: ಜಿಯೋ ಸಿನಿಮಾಏಕದಿನ ರ್‍ಯಾಂಕಿಂಗ್‌: 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧನಾದುಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿದ್ದ ಭಾರತದ ತಾರಾ ಬ್ಯಾಟರ್‌ ಸ್ಮೃತಿ ಮಂಧನಾ, ಐಸಿಸಿ ಮಹಿಳಾ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 2 ಸ್ಥಾನ ಏರಿಕೆ ಕಂಡಿದ್ದಾರೆ. ಮಂಗಳವಾರ ಪ್ರಕಟಗೊಂಡ ಪರಿಷ್ಕೃತ ಪಟ್ಟಿಯಲ್ಲಿ ಸ್ಮೃತಿ 3ನೇ ಸ್ಥಾನ ಪಡೆದಿದ್ದಾರೆ. ಸ್ಮೃತಿ 715 ರೇಟಿಂಗ್‌ ಅಂಕಗಳನ್ನು ಹೊಂದಿದ್ದಾರೆ. ಇಂಗ್ಲೆಂಡ್‌ನ ನಥಾಲಿ ಸ್ಕೀವರ್‌ ಬ್ರಂಟ್‌ ಹಾಗೂ ಶ್ರೀಲಂಕಾದ ಚಾಮರಿ ಅಟಾಪಟು ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ದೀಪ್ತಿ ಶರ್ಮಾ 1 ಸ್ಥಾನ ಮೇಲೇರಿ 4ನೇ ಸ್ಥಾನ ಪಡೆದಿದ್ದಾರೆ.