ಸಾರಾಂಶ
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.ತಂಡದ ನಾಯಕ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಹೈದರಾಬಾದ್: ಇಂಗ್ಲೆಂಡ್ ವಿರುದ್ಧ ಜ.25ರಿಂದ ಆರಂಭಗೊಳ್ಳಲಿರುವ 5 ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಈಗಾಗಲೇ ತಂಡದ ಆಟಗಾರರು ಜ.20ರಂದೇ ಹೈದರಾಬಾದ್‌ನಲ್ಲಿ ಒಂದುಗೂಡಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ತಂಡದ ನಾಯಕ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಇತರ ಆಟಗಾರರು ಕೂಡಾ ನೆಟ್ಸ್‌ನಲ್ಲಿ ಬೆವರಿಳಿಸುತ್ತಿದ್ದಾರೆ. ಅತ್ತ ಇಂಗ್ಲೆಂಡ್ ಆಟಗಾರರು 10 ದಿನಗಳಿಂದ ಅಬು ಧಾಬಿಯಲ್ಲಿ ಅಭ್ಯಾಸ ನಡೆಸಿದ್ದು, ಭಾನುವಾರ ಹೈದರಾಬಾದ್‌ಗೆ ಆಗಮಿಸಿದ್ದಾರೆ. ಸೋಮವಾರದಿಂದ ಇಂಗ್ಲೆಂಡ್ ಆಟಗಾರರು ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಭಾರತದ ವಿರುದ್ಧ ಟೆಸ್ಟ್:ಇಂಗ್ಲೆಂಡ್‌ನ ಬ್ರೂಕ್ ಔಟ್‌ಲಂಡನ್: ಜ.25ರಿಂದ ಭಾರತ ವಿರುದ್ಧ ಆರಂಭವಾಗಲಿರುವ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಹೊರನಡೆದಿದ್ದಾರೆ. ಅವರು ವೈಯಕ್ತಿಕ ಕಾರಣದಿಂದ ಸ್ವದೇಶಕ್ಕೆ ಹಿಂದಿರುಗಿದ್ದಾರೆ. ಬದಲಿ ಆಟಗಾರನಾಗಿ ಡ್ಯಾನ್ ಲಾರೆನ್ಸ್ ತಂಡ ಸೇರಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಭಾರತದ ವಿರುದ್ಧದ ಸರಣಿಯ ಸಿದ್ಧತೆಗಾಗಿ ಬ್ರೂಕ್ ತಂಡದೊಂದಿಗೆ ಅಬು ಧಾಬಿಯಲ್ಲಿ ಅಭ್ಯಾಸದಲ್ಲಿ ತೊಡಗಿದ್ದರು.)
;Resize=(128,128))
;Resize=(128,128))
;Resize=(128,128))