ಸಾರಾಂಶ
ನವದೆಹಲಿ: ಭಾರತ ಕ್ರಿಕೆಟ್ ತಂಡ ಈ ಬಾರಿ ಹಾಂಕಾಂಗ್ ಸಿಕ್ಸ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ತಲಾ 6 ಆಟಗಾರರೊಂದಿಗೆ ಆಡುವ ಟೂರ್ನಿ ನ.1ರಿಂದ 3ರ ವರೆಗೆ ಹಾಂಕಾಂಗ್‌ನಲ್ಲಿ ನಡೆಯಲಿದ್ದು, ಒಟ್ಟು 12 ತಂಡಗಳು ಪಾಲ್ಗೊಳ್ಳಲಿವೆ.
ಈ ಟೂರ್ನಿಯನ್ನು 1993ರಿಂದಲೂ ಹಾಂಕಾಂಗ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿದೆ. ಕೆಲ ಆವೃತ್ತಿಗಳಲ್ಲಿ ಭಾರತ ಆಡಿದ್ದು, 2005ರಲ್ಲಿ ಚಾಂಪಿಯನ್ ಆಗಿತ್ತು. ಆದರೆ 2017ರ ಬಳಿಕ ಟೂರ್ನಿ ಸ್ಥಗಿತಗೊಂಡಿತ್ತು. ಈ ಬಾರಿ ಮತ್ತೆ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಟೂರ್ನಿ ಸಾಧಾರಣ ಕ್ರಿಕೆಟ್ ಪಂದ್ಯಕ್ಕಿಂತ ವಿಭಿನ್ನವಾದ ನಿಯಮಗಳನ್ನು ಹೊಂದಿದೆ.
ನಿಯಮಗಳೇನು?
1. ಪ್ರತಿ ತಂಡದಲ್ಲಿ ಆರು ಆಟಗಾರರು. ತಲಾ 5 ಓವರ್ ಆಟ. ಫೈನಲ್‌ನಲ್ಲಿ ಮಾತ್ರ ಪ್ರತಿ ಓವರ್‌ಗೆ 8 ಎಸೆತ.2. ವಿಕೆಟ್ ಕೀಪರ್ ಹೊರತುಪಡಿಸಿ ಬೇರೆಲ್ಲರೂ ತಲಾ 1 ಓವರ್ ಬೌಲ್ ಮಾಡಬೇಕು. ವೈಡ್, ನೋಬಾಲ್‌ಗೆ 2 ರನ್.3. ತಂಡದ 5 ಬ್ಯಾಟರ್‌ಗಳು ಔಟಾದರೂ 6ನೇ ಬ್ಯಾಟರ್ ಆಟ ಮುಂದುವರಿಸುತ್ತಾರೆ. ಔಟಾಗದೇ ಇರುವ ಬ್ಯಾಟರ್ ಎಲ್ಲಾ ಸಮಯದಲ್ಲೂ ಸ್ಟ್ರೈಕ್‌ನಲ್ಲಿರಬೇಕು. ಮತ್ತೋರ್ವ ಆಟಗಾರ ಕೇವಲ ರನ್ನರ್ ಆಗಿರುತ್ತಾರೆ. 6ನೇ ಬ್ಯಾಟರ್ ಔಟಾದರೆ ಮಾತ್ರ ತಂಡ ಆಲೌಟ್.