ವೈವಾಹಿಕ ಜೀವನಕ್ಕೆ ಕಾಲಿಟ್ಟ ಭಾರತದ ತಾರಾ ಜಾವೆಲಿನ್‌ ಎಸೆತಗಾರ, ಒಲಿಂಪಿಕ್ಸ್‌ ಚಾಂಪಿಯನ್‌ ನೀರಜ್‌

| Published : Jan 20 2025, 04:50 AM IST

neeraj chopra marriage

ಸಾರಾಂಶ

ಭಾರತದ ತಾರಾ ಜಾವೆಲಿನ್‌ ಎಸೆತಗಾರ, ಒಲಿಂಪಿಕ್ಸ್‌ ಚಾಂಪಿಯನ್‌ ನೀರಜ್‌ ಚೋಪ್ರಾ ಭಾನುವಾರ ಹೀಮಾನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಇದರ ಫೋಟೋಗಳನ್ನು ನೀರಜ್‌ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.

 ನವದೆಹಲಿ : ಭಾರತದ ತಾರಾ ಜಾವೆಲಿನ್‌ ಎಸೆತಗಾರ, ಒಲಿಂಪಿಕ್ಸ್‌ ಚಾಂಪಿಯನ್‌ ನೀರಜ್‌ ಚೋಪ್ರಾ ಭಾನುವಾರ ಹೀಮಾನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಇದರ ಫೋಟೋಗಳನ್ನು ನೀರಜ್‌ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಜಾವಲಿನ್ ಪಟು ನೀರಜ್ ಚೋಪ್ರಾ ಹಾಗೂ ಶೂಟರ್ ಮನು ಬಾಕರ್ ರಿಲೇಶನ್‌ಶಿಪ್‌ನಲ್ಲಿದ್ದಾರೆ ಅನ್ನೋ ಮಾತುಗಳು ಜೋರಾಗಿ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಸಾಮಾಜಿಕ ಜಾಲತಾಣ ಸೇರಿ ಇತರ ವೇದಿಕೆಗಳಲ್ಲಿ ಇವರಿಬ್ಬರ ರಿಲೇಶನ್‌ಶಿಪ್‌ಗೆ ಪುಷ್ಠಿ ನೀಡುವ ಅಂಶಗಳು ಪತ್ತೆಯಾಗಿತ್ತು. ಆದರೆ ಈ ಮಾತುಗಳು ಕೇಳಿಬರುತ್ತಿರುವ ನಡುವೆ ನೀರಜ್ ಚೋಪ್ರಾ ಸದ್ದಿಲ್ಲದೆ ಮದುವೆಯಾಗಿದ್ದಾರೆ.

ನೀರಜ್ ಚೋಪ್ರಾ ಅವರ ಪತ್ನಿ ಹಿಮಾನಿ ಪ್ರಸ್ತುತ USAನಲ್ಲಿ ಓದುತ್ತಿದ್ದಾರೆ. ಖಾಸಗಿ ಸಮಾರಂಭದಲ್ಲಿ ಆಪ್ತರು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ. ನೀರಜ್ ಮದುವೆ ಕುರಿತು ಯಾರಿಗೂ ಯಾವುದೇ ಸುಳಿವು ಇರಲಿಲ್ಲ. ಆಪ್ತರು ಹಾಗೂ ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.