3ನೇ ಬಾರಿ ಏಷ್ಯನ್ ಕ್ರಿಕೆಟ್‌ ಸಂಸ್ಥೆಗೆ ಜಯ ಶಾ ಮುಖ್ಯಸ್ಥ

| Published : Feb 01 2024, 02:01 AM IST

ಸಾರಾಂಶ

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ)ಗೆ ಸತತ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನವದೆಹಲಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ)ಗೆ ಸತತ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಬುಧವಾರ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಎಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಯ್‌ ಶಾ ಅವರ ಅಧಿಕಾರ ಅವಧಿ ವಿಸ್ತರಣೆಯನ್ನು ಶ್ರೀಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಪ್ರಸ್ತಾಪಿಸಿದ್ದು, ಅದನ್ನು ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ. ಅವರು ಇನ್ನೊಂದು ವರ್ಷ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಜಯ್‌ ಶಾ 2021ರ ಜನವರಿಯಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದು, ಆ ಬಳಿಕ ಸತತ 2ನೇ ಬಾರಿಯೂ ಅವಿರೋಧವಾಗಿ ಹುದ್ದೆಗೆ ಮರು ಆಯ್ಕೆಯಾಗಿದ್ದಾರೆ. ಶಾ ಅಧಿಕಾರಾವಧಿಯಲ್ಲಿ ಎಸಿಸಿ 2022 ಹಾಗೂ 2023ರಲ್ಲಿ ಏಷ್ಯಾ ಕಪ್‌ ಟೂರ್ನಿಗಳನ್ನು ಆಯೋಜಿಸಿತ್ತು.ಶಾ ಅವರು 2019ರಿಂದಲೂ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ) ಮುಖ್ಯಸ್ಥ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.