ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌: ಸೆಮಿಫೈನಲ್‌ನಲ್ಲಿ ಸೋತ ಸೇನ್‌

| Published : Mar 17 2024, 01:47 AM IST / Updated: Mar 17 2024, 12:13 PM IST

ಸಾರಾಂಶ

ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌, ವಿಶ್ವ ನಂ.18 ಸೇನ್‌ಗೆ ಇದು ವಿಶ್ವ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನದಲ್ಲಿರುವ ಕ್ರಿಸ್ಟೀ ವಿರುದ್ಧ 4 ಪಂದ್ಯಗಳಲ್ಲಿ ಎದುರಾದ 3ನೇ ಸೋಲು.

ಬರ್ಮಿಂಗ್‌ಹ್ಯಾಮ್‌: ಭಾರತದ ತಾರಾ ಶಟ್ಲರ್‌ ಲಕ್ಷ್ಯ ಸೇನ್‌ ಅವರ ಚೊಚ್ಚಲ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಗೆಲ್ಲುವ ಕನಸು ಭಗ್ನಗೊಂಡಿದೆ. 22ರ ಸೇನ್‌ ಶನಿವಾರ ಸೆಮಿಫೈನಲ್‌ನಲ್ಲಿ ಅಭಿಯಾನ ಕೊನೆಗೊಳಿಸಿದರು. 

ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.2022ರಲ್ಲಿ ರನ್ನರ್‌-ಅಪ್‌ ಆಗಿದ್ದ ಸೇನ್‌ ಪುರುಷರ ಸಿಂಗಲ್ಸ್‌ ಅಂತಿಮ 4ರ ಘಟ್ಟದ ಪಂದ್ಯದಲ್ಲಿ ಇಂಡೋನೇಷ್ಯಾದ ಜೊನಾಥನ್‌ ಕ್ರಿಸ್ಟೀ ವಿರುದ್ಧ 12-21, 21-10, 15-21 ಗೇಮ್‌ಗಳಲ್ಲಿ ಪರಾಭವಗೊಂಡರು. 

ಇದು ವಿಶ್ವ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನದಲ್ಲಿರುವ ಕ್ರಿಸ್ಟೀ ವಿರುದ್ಧ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌, ವಿಶ್ವ ನಂ.18 ಸೇನ್‌ಗೆ 4 ಪಂದ್ಯಗಳಲ್ಲಿ ಎದುರಾದ 3ನೇ ಸೋಲು.

ಇದಕ್ಕೂ ಮುನ್ನ ಸೇನ್‌ ಶುಕ್ರವಾರ ರಾತ್ರಿ ಮಲೇಷ್ಯಾದ ಲೀ ಝಿ ಜಿಯಾ ವಿರುದ್ಧ ಕ್ವಾರ್ಟರ್‌ ಫೈನಲ್‌ನಲ್ಲಿ 20-22, 21-16, 21-19ರಲ್ಲಿ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದ್ದರು.