ಸಾರಾಂಶ
ಕರ್ನಾಟಕದ ಬಿ.ಗುಣರಂಜನ್ ಶೆಟ್ಟಿಗೆ ಹೊಸ ಜವಾಬ್ದಾರಿ. ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷ ಈಗ ಭಾರತ ಬೀಚ್ ಕುಸ್ತಿ ಸಂಸ್ಥೆಗೂ ಬಾಸ್. ನೊಯ್ಡಾದಲ್ಲಿ ನಡೆದ ಭಾರತೀಯ ಕುಸ್ತಿ ಫೆಡರೇಶನ್‌ನ ಸಭೆಯಲ್ಲಿ ಗುಣರಂಜನ್ ಆಯ್ಕೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಅವರನ್ನು ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.ನೋಯ್ಡದಲ್ಲಿ ಶುಕ್ರವಾರ ನಡೆದ ಭಾರತೀಯ ಕುಸ್ತಿ ಸಂಘದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಭಾರತೀಯ ಬೀಚ್ ಕುಸ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಗುಣರಂಜನ್ ಅವರು ಆಯ್ಕೆಯಾಗಿದ್ದರು. ದಕ್ಷಿಣಕನ್ನಡ ಜಿಲ್ಲೆಯ ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಬಿ.ಗುಣರಂಜನ್ ಶೆಟ್ಟಿ ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದವರು.ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ನಂತರ ಸಂಘಕ್ಕೆ ಕಾಯಕಲ್ಪ ನೀಡಿದ್ದರು. ಕುಸ್ತಿಪಟುಗಳಿಗೆ ಅಗತ್ಯ ತರಬೇತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡುವ ಮೂಲಕ ಕುಸ್ತಿ ಪಂದ್ಯಾವಳಿಗಳಲ್ಲಿ ಕರ್ನಾಟಕದ ಕುಸ್ತಿಪಟುಗಳು ಜಯಶಾಲಿಗಲು ಕಾರಣೀಭೂತರಾಗಿದ್ದಾರೆ.