ಸಾರಾಂಶ
ಬೆಂಗಳೂರು: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ(ಕೆಎಸ್‌ಎಫ್‌ಎ) ಆಯೋಜಿಸುವ ರಾಜ್ಯ ಮಹಿಳಾ ಫುಟ್ಬಾಲ್ ಲೀಗ್ ಜು.22ರಿಂದ ಆರಂಭಗೊಳ್ಳಲಿದೆ. ಟೂರ್ನಿಯಲ್ಲಿ ಬೆಂಗಳೂರು ಎಫ್‌ಸಿ, ಕೊಡಗು ಎಫ್‌ಸಿ, ಕಿಕ್‌ಸ್ಟಾರ್ಟ್ ಎಫ್‌ಸಿ, ಮಾತೃ ಪ್ರತಿಷ್ಠಾನ, ಕೆಂಪ್ ಎಫ್‌ಸಿ, ಪಿಂಕ್ ಪ್ಯಾಂಥರ್ಸ್ ಸೇರಿದಂತೆ 10 ತಂಡಗಳು ಪಾಲ್ಗೊಳ್ಳಲಿವೆ. ಪ್ರತಿ ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಇತರೆಲ್ಲಾ ತಂಡಗಳ ವಿರುದ್ಧ ತಲಾ 1 ಪಂದ್ಯಗಳನ್ನಾಡಲಿವೆ.
ಎಲ್ಲಾ ಪಂದ್ಯಗಳಿಗೆ ನಗರದ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಸದ್ಯ ಆ.2ರ ವರೆಗಿನ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕೆಎಸ್‌ಎಫ್‌ಎ ತಿಳಿಸಿದೆ.
ಲಂಕಾ ಸರಣಿಗೆ ಮುಂದಿನ ವಾರ ಭಾರತ ತಂಡ ಅಯ್ಕೆ
ಮುಂಬೈ: ಶ್ರೀಲಂಕಾ ವಿರುದ್ಧ ಜುಲೈ 26ರಿಂದ ಆರಂಭಗೊಳ್ಳಲಿರುವ ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡ ಮುಂದಿನ ವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈ ಸರಣಿ ಮೂಲಕ ಅಧಿಕೃತವಾಗಿ ಪ್ರಧಾನ ಕೋಚ್ ಹುದ್ದೆ ಅಲಂಕರಿಸಲಿರುವ ಗೌತಮ್ ಗಂಭೀರ್ ಅವರು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ತಂಡವನ್ನು ಅಂತಿಮಗೊಳಿಸಲಿದ್ದಾರೆ. ವರದಿಗಳ ಪ್ರಕಾರ ಹಾರ್ದಿಕ್ ಪಾಂಡ್ಯ ಟಿ20, ಕರ್ನಾಟಕದ ಕೆ.ಎಲ್.ರಾಹುಲ್ ಏಕದಿನ ತಂಡಕ್ಕೆ ನಾಯಕತ್ವ ವಹಿಸುವ ಸಾಧ್ಯತೆಯಿದೆ. ಸರಣಿಯ 3 ಟಿ20 ಪಂದ್ಯಗಳು ಕ್ರಮವಾಗಿ ಜು.27, 28 ಹಾಗೂ 30ಕ್ಕೆ ಪಲ್ಲೆಕೆಲೆಯಲ್ಲಿ, 3 ಏಕದಿನ ಪಂದ್ಯಗಳು ಆ.2, 4 ಹಾಗೂ 7ರಂದು ಕೊಲಂಬೊದಲ್ಲಿ ನಿಗದಿಯಾಗಿದೆ.
;Resize=(128,128))
;Resize=(128,128))