ಸಾರಾಂಶ
ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ 27 ರನ್‌ಗಳ ಜಯ ಸಾಧಿಸಿರುವ ಆಸ್ಟ್ರೇಲಿಯಾ 3 ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ.
ಅಕ್ಲಂಡ್: ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ 27 ರನ್‌ಗಳ ಜಯ ಸಾಧಿಸಿರುವ ಆಸ್ಟ್ರೇಲಿಯಾ 3 ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ. ಇದರೊಂದಿಗೆ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ಗೆ ಭರ್ಜರಿ ಸಿದ್ಧತೆ ನಡೆಸಿದೆ.
ಟಾಸ್ ಸೋತ ಆಸೀಸ್ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಾಗ ಪದೇ ಪದೆ ಮಳೆ ಅಡ್ಡಿಪಡಿಸಿತು. 10.4 ಓವರ್‌ಗಳಾಗಿದ್ದಾಗ ಭಾರೀ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಳಿಸಲಾಯಿತು. ಆಗ ಆಸೀಸ್ 4 ವಿಕೆಟ್ ಕಳೆದುಕೊಂಡು 118 ರನ್ ಗಳಿಸಿತ್ತು. ನಂತರ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ನ್ಯೂಜಿಲೆಂಡ್‌ಗೆ 10 ಓವರ್‌ಗಳಲ್ಲಿ 126 ರನ್ ಗುರಿ ನಿಗದಿಪಡಿಸಲಾಯಿತು. ಆದರೆ 3 ವಿಕೆಟ್ ಕಳೆದುಕೊಂಡು 98 ರನ್ ಗಳಿಸಲಷ್ಟೆ ಶಕ್ತವಾದ ಕಿವೀಸ್ ಸೋಲೊಪ್ಪಿಕೊಂಡಿತು. ಗ್ಲೆನ್ ಫಿಲಿಪ್ಸ್ 24 ಎಸೆತದಲ್ಲಿ 40 ರನ್ ಸಿಡಿಸಿ ಔಟಾಗದೆ ಉಳಿದರು.ಇದೇ ವೇಳೆ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ 100 ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿದ ಆಟಗಾರ ಎಂಬ ಕೀರ್ತಿಗೆ ಪಾತ್ರವಾದರು.