ಸಾರಾಂಶ
ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್, ಪ್ರಿಯಾನ್ಶು ರಾಜಾವತ್, ಮಹಿಳಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್ ಕೂಡಾ ಕಣಕ್ಕಿಳಿಯಲಿದ್ದಾರೆ.
ಬಾಸೆಲ್(ಸ್ವಿಜರ್‌ಲೆಂಡ್): ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿ ಮಂಗಳವಾರದಿಂದ ಆರಂಭಗೊಳ್ಳಲಿದ್ದು, ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು, ಲಕ್ಷ್ಯ ಸೇನ್ ಸುಧಾರಿತ ಪ್ರದರ್ಶನ ನೀಡಿ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್, ಪ್ರಿಯಾನ್ಶು ರಾಜಾವತ್, ಮಹಿಳಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್ ಕಣಕ್ಕಿಳಿಯಲಿದ್ದಾರೆ. ಮಹಿಳಾ ಡಬಲ್ಸ್‌ನಲ್ಲಿ ಕರ್ನಾಟದಕ ಅಶ್ವಿನಿ ಪೊನ್ನಪ್ಪ-ತನಿಶಾ ಕ್ರಾಸ್ಟೊ, ತ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಪ್ರಶಸ್ತಿ ಬರ ನೀಗಿಸುವ ಕಾತರದಲ್ಲಿದ್ದಾರೆ.ಪೋಲಿಶ್ ಗ್ರ್ಯಾನ್ ಪ್ರಿ: 6 ಪದಕ ಗೆದ್ದ ಭಾರತ
ನವದೆಹಲಿ: ಪೋಲೆಂಡ್‌ನಲ್ಲಿ ನಡೆದ ಪೋಲಿಶ್ ಗ್ರ್ಯಾನ್ ಪ್ರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಶೂಟರ್‌ಗಳು 6 ಪದಕಗಳನ್ನು ಗೆದ್ದು ಅಭಿಯಾನ ಕೊನೆಗೊಳಿಸಿದ್ದಾರೆ. ಅಖಿಲ್ ಶೊರೇನ್ ಪುರುಷರ 50 ಮೀ. ರೈಫಲ್ 3-ಪೊಸಿಷನ್‌ನಲ್ಲಿ, ಅನೀಶ್ ಭನ್ವಾಲಾ ಪುರುಷರ 25 ಮೀ. ರ್‍ಯಾಪಿಡ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಆಶಿ ಚೋಕ್ಸಿ ಮಹಿಳೆಯರ 3 ಪೊಸಿಷನ್‌ನಲ್ಲಿ ಬೆಳ್ಳಿ, ಶ್ರಿಯಾಂಕಾ ಕಂಚು ಪಡೆದರು. ನೀರಜ್ ಕುಮಾರ್ 2 ವಿಭಾಗಗಳಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.