ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಹೆಬ್ಬಾಳ್ಕರ್

| Published : Nov 20 2023, 12:45 AM IST

ಸಾರಾಂಶ

ಭಾರತ ತಂಡ ಟೂರ್ನಿಯಲ್ಲಿ ಸತತ 10 ಪಂದ್ಯಗಳಲ್ಲಿ ಜಯ ದಾಖಲಿಸಿದ್ದು, ಫೈನಲ್ ಪಂದ್ಯದಲ್ಲೂ ಭಾರತ ತಂಡವೇ ಜಯಿಸಲಿ ಎಂದಿದ್ದಾರೆ.

ಬೆಳಗಾವಿ: ರೋಹಿತ್ ಶರ್ಮ‌ ಸಾರಥ್ಯದ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್‌ ಶುಭ ಹಾರೈಸಿದ್ದಾರೆ.ಭಾರತ ತಂಡ ಟೂರ್ನಿಯಲ್ಲಿ ಸತತ 10 ಪಂದ್ಯಗಳಲ್ಲಿ ಜಯ ದಾಖಲಿಸಿದ್ದು, ಫೈನಲ್ ಪಂದ್ಯದಲ್ಲೂ ಭಾರತ ತಂಡವೇ ಜಯಿಸಲಿ ಎಂದಿದ್ದಾರೆ. ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಗೆಲುವಿನ ಅಭಿಯಾನ ಆರಂಭಿಸಿದ್ದ ಭಾರತ, ಇದೇ ಗೆಲುವಿನ ಲಯವನ್ನು ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲೂ ಮುಂದುವರಿಸಲಿ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಕೋರಿದ್ದಾರೆ. ನಾಯಕ ರೋಹಿತ್ ಶರ್ಮ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಕನ್ನಡಿಗ ರಾಹುಲ್ ಒಳಗೊಂಡ ಭಾರತ ತಂಡದಿಂದ ಸಂಘಟಿತ ಹೋರಾಟ ಮೂಡಿ ಬರಲಿ ಎಂದು ಸಚಿವರು ಆಶಿಸಿದ್ದಾರೆ.