ಸಾರಾಂಶ
: ಐಪಿಎಲ್‌ನಿಂದ ನಿವೃತ್ತಿಯಾಗುವ ಬಗ್ಗೆ ಭಾರತದ ದಿಗ್ಗಜ ಕ್ರಿಕೆಟಿಗ ಎಂ.ಎಸ್.ಧೋನಿ ಮೌನ ಮುರಿದಿದ್ದಾರೆ. ನಿವೃತ್ತಿಯ ಬಗ್ಗೆ ನಾನಲ್ಲ, ನನ್ನ ದೇಹ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ನವದೆಹಲಿ: ಐಪಿಎಲ್‌ನಿಂದ ನಿವೃತ್ತಿಯಾಗುವ ಬಗ್ಗೆ ಭಾರತದ ದಿಗ್ಗಜ ಕ್ರಿಕೆಟಿಗ ಎಂ.ಎಸ್.ಧೋನಿ ಮೌನ ಮುರಿದಿದ್ದಾರೆ. ನಿವೃತ್ತಿಯ ಬಗ್ಗೆ ನಾನಲ್ಲ, ನನ್ನ ದೇಹ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಸಿಎಸ್‌ಕೆ ಆಟಗಾರ ಧೋನಿ, ‘ನಾನು ಈಗಲೂ ಐಪಿಎಲ್ ಆಡುತ್ತಿದ್ದೇನೆ ಮತ್ತು ಸದ್ಯಕ್ಕೆ 1 ವರ್ಷದ ಐಪಿಎಲ್ ಬಗ್ಗೆ ಮಾತ್ರ ಯೋಚಿಸುತ್ತೇನೆ. ಈ ಐಪಿಎಲ್ ಮುಗಿದು, ಜುಲೈನಲ್ಲಿ ನನಗೆ 44 ವರ್ಷವಾಗುತ್ತದೆ. ಇನ್ನೊಂದು ವರ್ಷ ಆಡಬೇಕೇ ಬೇಡವೇ ಎಂಬ ನಿರ್ಧಾರ ಕೈಗೊಳ್ಳಲು ನನಗೆ 10 ತಿಂಗಳ ಸಮಯಾವಕಾಶವಿದೆ’ ಎಂದಿದ್ದಾರೆ.