ಸಾರಾಂಶ
2025ರ ಕಿರಿಯರ ಹಾಕಿ ವಿಶ್ವಕಪ್‌ಗೆ ಆತಿಥ್ಯ ವಹಿಸಲಿದೆ ಭಾರತ. 4ನೇ ಬಾರಿಗೆ ಭಾರತಕ್ಕೆ ಆತಿಥ್ಯ ಹಕ್ಕು. ದೇಶದ ಯಾವ ನಗರದಲ್ಲಿ ಟೂರ್ನಿ ನಡೆಯಲಿದೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.
ಲುಸ್ಸಾನೆ (ಸ್ವಿಜರ್‌ಲೆಂಡ್): ಮುಂದಿನ ವರ್ಷ ಕಿರಿಯ ಪುರುಷರ ಹಾಕಿ ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ. 2025ರ ಡಿಸೆಂಬರ್‌ನಲ್ಲಿ ಪಂದ್ಯಾವಳಿ ನಡೆಯಲಿದ್ದು, ಇದೇ ಮೊದಲ ಬಾರಿಗೆ ಟೂರ್ನಿಯಲ್ಲಿ 24 ತಂಡಗಳು ಸೆಣಸಲಿವೆ. ಭಾರತ 4ನೇ ಬಾರಿಗೆ ಟೂರ್ನಿಗೆ ಆತಿಥ್ಯ ನೀಡಲಿದೆ. 2013ರಲ್ಲಿ ನವದೆಹಲಿ 2016ರಲ್ಲಿ ಲಖನೌ, 2021ರಲ್ಲಿ ಭುವನೇಶ್ವರದಲ್ಲಿ ಪಂದ್ಯಾವಳಿ ನಡೆದಿತ್ತು. 2016ರಲ್ಲಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 2025ರ ಟೂರ್ನಿ ಯಾವ ನಗರದಲ್ಲಿ ನಡೆಯಲಿದೆ ಎನ್ನುವುದು ಇನ್ನಷ್ಟೇ ಘೋಷಣೆಯಾಗಬೇಕಿದೆ.ಬ್ಯಾಡ್ಮಿಂಟನ್ ವಿಶ್ವ ರ್‍ಯಾಂಕಿಂಗ್: ನಂ.1 ಸ್ಥಾನ ಕಳೆದುಕೊಂಡ ಸ್ವಾತಿಕ್-ಚಿರಾಗ್ ಶೆಟ್ಟಿ
ನವದೆಹಲಿ: ಭಾರತದ ತಾರಾ ಶಟ್ಲರ್‌ಗಳಾದ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ, ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್‌ನ ಪುರುಷರ ಡಬಲ್ಸ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದಾರೆ. ಕಳೆದ ವಾರ ಇಂಡೋನೇಷ್ಯಾ ಓಪನ್‌ನಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಭಾರತೀಯ ಜೋಡಿಗೆ ಅಗ್ರಸ್ಥಾನ ಕೈತಪ್ಪಿದ್ದು, 3ನೇ ಸ್ಥಾನಕ್ಕೆ ಕುಸಿದಿದೆ. ಚೀನಾದ ಲಿಯಾಂಗ್ ವೀ ಕೆಂಗ್ ಹಾಗೂ ವಾಂಗ್ ಚಾಂಗ್ ನಂ.1 ಸ್ಥಾನಕ್ಕೇರಿದ್ದು, ಡೆನ್ಮಾರ್ಕ್‌ನ ಕಿಮ್ ಆ್ಯಸ್ಟ್ರುಪ್ ಹಾಗೂ ಆ್ಯಂಡರ್ಸ್ ರಾಸ್ಮೂಸೆನ್ 2ನೇ ಸ್ಥಾನಕ್ಕೇರಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಪ್ರಣಯ್ ಹಾಗೂ ಲಕ್ಷ್ಯ ಸೇನ್ ಕ್ರಮವಾಗಿ 10 ಹಾಗೂ 14ನೇ ಸ್ಥಾನ ಕಾಯ್ದುಕೊಂಡಿದ್ದು, ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ.ಸಿಂಧು 10ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.