ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.11 ರಿಂದ 27 ರವರೆಗೆ ನಡೆಯುವ ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ20 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡವು ಸಜ್ಜಾಗಿದ್ದು, ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ತವಕದಲ್ಲಿದೆ.
ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ನಲ್ಲಿ ನ್ಯೂಜಿಲೆಂಡ್ ಬೃಹತ್ ಮೊತ್ತ ಕಲೆಹಾಕಿದೆ. ಜಿಂಬಾಬ್ವೆಯ 125 ರನ್ಗೆ ಉತ್ತರವಾಗಿ ಕಿವೀಸ್ 2ನೇ ದಿನದಂತ್ಯಕ್ಕೆ 3 ವಿಕೆಟ್ಗೆ 601 ರನ್ ಗಳಿಸಿದ್ದು, 476 ರನ್ಗಳ ದೊಡ್ಡ ಮುನ್ನಡೆ ಪಡೆದಿದೆ.