ಕೇಂದ್ರ ಸರ್ಕಾರ ಲಗಾಮು : ಆರ್ಟಿಐ ವ್ಯಾಪ್ತಿಗೆ ಬಿಸಿಸಿಐ?ವಿಶ್ವದ ಸಿರಿವಂತ ಕ್ರಿಕೆಟ್ ಸಂಸ್ಥೆ ಅಂತಲೇ ಗುರುತಿಸಿಕೊಂಡಿರುವ ಬಿಸಿಸಿಐ ಮೇಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಖಾಸಗಿಯಾಗಿಯೇ ಉಳಿದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ವ್ಯಾಪ್ತಿಗೆ ಸೇರಿಸಲು ಸಂಸತ್ನಲ್ಲಿ ಮಸೂದೆ ಮಂಡಿಸಿದೆ.