ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿ ಕರ್ನಾಟಕದ ಕ್ರೀಡಾ ಸಾಧಕರುಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಸಾಧನೆ ಮಾಡಿದ್ದ ಕರ್ನಾಟಕದ ಅಥ್ಲೀಟ್ಗಳು ಸದ್ಯ ರಾಜ್ಯ ಸರ್ಕಾರದ ಹುದ್ದೆ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಅರ್ಹರ ಹೆಸರುಗಳನ್ನು ಸೂಚಿಸುವಂತೆ ಕ್ರೀಡಾ ಇಲಾಖೆಯಿಂದ ರಾಜ್ಯ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ನಡೆಯುವ ಸಾಧ್ಯತೆಯಿದೆ.