ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು.
ಬೆಂಗಳೂರು ಮ್ಯಾರಥಾನ್ ಭಾನುವಾರ ನಡೆಯಲಿದ್ದು, 30 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ. 41.195 ಕಿ.ಮೀ. ಫುಲ್ ಮ್ಯಾರಥಾನ್, 21.1 ಕಿ.ಮೀ. ಹಾಫ್ ಮ್ಯಾರಥಾನ್, 10ಕೆ ಓಟ ಹಾಗೂ 5ಕೆ ಹೋಪ್ ರನ್ ಸ್ಪರ್ಧೆಗಳು ನಡೆಯಲಿವೆ.
2017ರಲ್ಲಿ ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಐಪಿಎಲ್ ಮಾದರಿಯ ಹಾಕಿ ಇಂಡಿಯಾ ಲೀಗ್ (ಎಚ್ಐಎಲ್) ಹೊಸ ರೂಪದಲ್ಲಿ ಮತ್ತೆ ಶುರುವಾಗಲಿದೆ ಎಂದು ತಿಳಿದುಬಂದಿದೆ.
ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ನಿರೀಕ್ಷೆಯೊಂದಿಗೆ ಯುಎಇ ವಿಮಾನವೇರಿದ್ದ ಭಾರತ ಮಹಿಳಾ ತಂಡ, 9ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಸೋಲಿನ ಆರಂಭ ಪಡೆದಿದೆ.
ಈ ಬಾರಿ ಇರಾನಿ ಕಪ್ ಕ್ರಿಕೆಟ್ ಪಂದ್ಯದಲ್ಲಿ ಬೃಹತ್ ಮೊತ್ತ ಗಳಿಸಿರುವ ಮುಂಬೈಗೆ ಶೇಷ ಭಾರತ ತಂಡ ದಿಟ್ಟ ಉತ್ತರ ನೀಡಿದೆ. ಪಂದ್ಯದಲ್ಲಿ ರನ್ ಹೊಳೆಯೇ ಹರಿಯುತ್ತಿದ್ದು, ಡ್ರಾದತ್ತ ಸಾಗುತ್ತಿದೆ.