ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ಧೂಳೀಪಟವಾದ ವೆಸ್ಟ್ಇಂಡೀಸ್, ಹಗಲು-ರಾತ್ರಿ ಮಾದರಿಯಲ್ಲಿ ನಡೆದ 3ನೇ ಟೆಸ್ಟ್ನ 2ನೇ ಇನ್ನಿಂಗ್ಸಲ್ಲಿ ಕೇವಲ 27 ರನ್ಗೆ ಆಲೌಟ್ ಆಗಿ ಮುಖಭಂಗಕ್ಕೊಳಗಾಯಿತು. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ 2ನೇ ಕನಿಷ್ಠ ಮೊತ್ತ ಎನಿಸಿತು.
ಮಹಾರಾಜ ಟ್ರೋಫಿ ಟಿ20 ಟೂರ್ನಿಯ 4 ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮಂಗಳವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ತಾರಾ ಆಟಗಾರ ದೇವದತ್ ಪಡಿಕ್ಕಲ್ ಗರಿಷ್ಠ 13.20 ಲಕ್ಷ ರು.ಗೆ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ ಬಿಕರಿಯಾಗಿ, ದುಬಾರಿ ಆಟಗಾರ ಎನಿಸಿಕೊಂಡರು.
ಭಾರತದ ತಾರಾ ಶಟ್ಲರ್ಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯವಾಡಿದ್ದಾರೆ
ಪೋಲೆಂಡ್ನ ತಾರಾ ಟೆನಿಸ್ ಆಟಗಾರ್ತಿ ಇಗಾ ಸ್ವಿಯಾಟೆಕ್ ಚೊಚ್ಚಲ ಬಾರಿಗೆ ವಿಂಬಲ್ಡನ್ ಗ್ರ್ಯಾನ್ ಸ್ಲಾಂ ಪ್ರಶಸ್ತಿ ಜಯಿಸಿದ್ದಾರೆ. ಶನಿವಾರ ನಡೆದ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಮಾಜಿ ವಿಶ್ವ ನಂ.1 ಆಟಗಾರ್ತಿ, ಅಮೆರಿಕದ ಅಮಾಂಡ ಅನಿಸಿಮೊವಾ ವಿರುದ್ಧ ಗ್ರ್ಯಾನ್ ಸ್ಲಾಂ ಜಯಿಸಿದರು.
25ನೇ ಗ್ರ್ಯಾನ್ ಸ್ಲಾಂ ಪ್ರಶಸ್ತಿ ಗೆಲ್ಲಬೇಕು ಎನ್ನುವ ನೋವಾಕ್ ಜೋಕೋವಿಚ್ರ ಕನಸು ಮತ್ತೆ ಭಗ್ನಗೊಂಡಿದೆ.