ಸಾರಾಂಶ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕಠಿಣ ಅಭ್ಯಾಸ. ಪರ್ತ್‌ನಲ್ಲಿ ಬೌನ್ಸ್ ಟೆಸ್ಟ್‌ಗೆ ನೆಟ್ಸ್‌ನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್ ಇತರರ. ಮುಂಬೈನಲ್ಲೇ ಅಭ್ಯಾಸ ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ. ಆಸ್ಟ್ರೇಲಿಯಾಗೆ ಹೊರಡುವ ಬಗ್ಗೆ ಇನ್ನೂ ನಿರ್ಧಾರವಿಲ್ಲ.
ಪರ್ತ್: ಆಸ್ಟ್ರೇಲಿಯಾ ವಿರುದ್ಧ ನ.22ರಿಂದ ಆರಂಭಗೊಳ್ಳಲಿರುವ ಮೊದಲ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಮಂಗಳವಾರವೇ ನೆಟ್ಸ್ ಅಭ್ಯಾಸ ಆರಂಭಿಸಿದ್ದ ಟೀಂ ಇಂಡಿಯಾ ಆಟಗಾರರು, ಬುಧವಾರವೂ ಕೆಲ ಗಂಟೆಗಳ ಕಾಲ ನೆಟ್ಸ್‌ನಲ್ಲಿ ಬೆವರಿಳಿಸಿದರು.
ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಶುಭ್‌ಮನ್ ಗಿಲ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಬ್ಯಾಟಿಂಗ್ ಅಭ್ಯಾಸ ನಡೆಸಿದರೆ, ಜಸ್‌ಪ್ರೀತ್ ಬೂಮ್ರಾ, ಮೊಹಮದ್ ಸಿರಾಜ್, ಆಕಾಶ್‌ದೀಪ್ ಸಿಂಗ್, ಆರ್.ಅಶ್ವಿನ್, ವಾಷಿಂಗ್ಟನ್ ಸುಂದರ್ ಬೌಲ್ ಮಾಡಿದರು. ಮುಂಬೈನಲ್ಲೇ ರೋಹಿತ್ ಅಭ್ಯಾಸ
2ನೇ ಮಗುವಿನ ನಿರೀಕ್ಷೆಯಲ್ಲಿರುವ ನಾಯಕ ರೋಹಿತ್ ಶರ್ಮಾ ಇನ್ನೂ ಆಸ್ಟ್ರೇಲಿಯಾಗೆ ತೆರಳಿಲ್ಲ. ಮೊದಲ ಟೆಸ್ಟ್‌ಗೆ ಅವರು ಗೈರಾಗುವುದು ಬಹುತೇಕ ಖಚಿತವಾಗಿದ್ದು, ರೋಹಿತ್ ಮುಂಬೈನಲ್ಲೇ ಅಭ್ಯಾಸ ನಡೆಸುತ್ತಿದ್ದಾರೆ. ಅವರು ಆಸ್ಟ್ರೇಲಿಯಾ ಪ್ರಯಾಣ ದಿನಾಂಕ ಇನ್ನೂ ನಿಗದಿಯಾಗಿಲ್ಲ.