6ನೇ ಯೂತ್‌ ಗೇಮ್ಸ್‌ಗೆ ಪ್ರಧಾನಿ ಮೋದಿ ಚಾಲನೆ

| Published : Jan 20 2024, 02:02 AM IST

ಸಾರಾಂಶ

6ನೇ ಆವೃತ್ತಿ ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ ಜ.31ರ ವರೆಗೆ ತಮಿಳುನಾಡಿನ ನಾಲ್ಕು ನಗರಗಳಲ್ಲಿ ನಡೆಯಲಿದೆ. ಶುಕ್ರವಾರ ಪ್ರಧಾನ ಮಂತ್ರಿ ನರೇದ್ರ ಮೋದಿ ಕೂಟಕ್ಕೆ ಚಾಲನೆ ನೀಡಿದರು.

ಚೆನ್ನೈ: 6ನೇ ಆವೃತ್ತಿ ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಚಾಲನೆ ನೀಡಿದರು. ಚೆನ್ನೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದೀಪ ಬೆಳಗುವ ಮೂಲಕ ಕೂಟವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ‘2024ನ್ನು ಯುವ ಅಥ್ಲೀಟ್‌ಗಳ ಕ್ರೀಡಾಕೂಟದೊಂದಿಗೆ ಆರಂಭಿಸುತ್ತಿರುವುದು ಖುಷಿಯ ಸಂಗತಿ. ಇದು ಯುವ ಜನತೆಗೆ ಕೌಶಲ್ಯ, ಸಾಮರ್ಥ್ಯ ಸಾಬೀತುಪಡಿಸಲು ವೇದಿಕೆ ಒದಗಿಸಲಿದೆ. ಮುಂಬರುವ ದಿನಗಳಲ್ಲಿ ಕ್ರೀಡಾ ಕ್ಷೇತ್ರವು ₹1 ಲಕ್ಷ ಕೋಟಿಯಷ್ಟು ಬೃಹತ್ತಾಗಿ ಬೆಳಯಲಿದೆ ಎಂದು ಹೇಳಿದರು.ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500+ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಜ.31ರ ವರೆಗೆ ಕೂಟ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.