ಸಾರಾಂಶ
ಪಡುಕೋಣೆ ದ್ರಾವಿಡ್ ಕ್ರೀಡಾ ಅಕಾಡೆಮಿಯಲ್ಲಿ ನಡೆಯುತ್ತಿರುವ ಎಸ್‌ಎಫ್‌ಎ ಚಾಂಪಿಯನ್‌ಶಿಪ್‌ನ 4ನೇ ದಿನದ ಕೂಟದಲ್ಲಿ ಉಪಸ್ಥಿತರಿದ್ದ ಪ್ರಕಾಶ್ ಪಡುಕೋಣೆ , ಕ್ರೀಡಾಳುಗಳನ್ನು ಹುರಿದುಂಬಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು ಮಕ್ಕಳು ಕ್ರೀಡೆಗಳಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸಲು ನಾವು ಮೈದಾನಗಳನ್ನು ಒದಗಿಸಬೇಕಾಗಿದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಲು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಚಾಂಪಿಯನ್‌ಶಿಪ್‌ಗಳು ಸಹಾಯ ಮಾಡುತ್ತವೆ ಎಂದು ಪಡುಕೋಣೆ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್‌ನ ಸಂಸ್ಥಾಪಕ ಪ್ರಕಾಶ್ ಪಡುಕೋಣೆ ಹೇಳಿದರು.
ಪಡುಕೋಣೆ ದ್ರಾವಿಡ್ ಕ್ರೀಡಾ ಅಕಾಡೆಮಿಯಲ್ಲಿ ನಡೆಯುತ್ತಿರುವ ಎಸ್‌ಎಫ್‌ಎ ಚಾಂಪಿಯನ್‌ಶಿಪ್‌ನ 4ನೇ ದಿನದ ಕೂಟಗಳಲ್ಲಿ ಉಪಸ್ಥಿತರಿದ್ದು, ಕ್ರೀಡಾಳುಗಳನ್ನು ಹುರಿದುಂಬಿಸಿದರು. ಉದಯೋನ್ಮುಖ ಕ್ರೀಡಾಪಟುಗಳಿಗೆ ಆರಂಭದಲ್ಲೇ ತರಬೇತಿ ನೀಡಿದರೆ ಉತ್ತಮ ವೃತ್ತಿ ಜೀವನ ಕಟ್ಟಿಕೊಳ್ಳಲು ಸಹಾಯವಾಗುತ್ತದೆ ಎಂದರು. 4 ನೇದಿನ ಕೂಟದಲ್ಲಿ ಬ್ಯಾಡ್ಮಿಂಟನ್, ಸ್ಕೇಟಿಂಗ್, ವಾಲಿಬಾಲ್, ಬಾಸ್ಕೆಟ್ಬಾಲ್, ಟೆನಿಸ್, ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡೆಯಲ್ಲಿ ಸುಮಾರು 1400 ವಿದ್ಯಾರ್ಥಿಗಳು ಭಾಗವಹಿಸಿದ್ದರು. 5ನೇ ದಿನ ಅಂಡರ್, 14, 16, 18 ವಿಭಾಗದ ಪುಟ್ಬಾಲ್, ವಾಲಿಬಾಲ್, ಟೆನಿಸ್, ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್ ಸ್ಫರ್ಧೆ ನಡೆಯಲಿವೆ.