ಸಾರಾಂಶ
ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್‌ರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.
ಬೆಂಗಳೂರು : ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್‌ರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.
ಕಿರಿಯರ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿ, ಇತ್ತೀಚೆಗೆ ಮುಕ್ತಾಯಗೊಂಡ 3ನೇ ಆವೃತ್ತಿಯ ಮಹಾರಾಜ ಟ್ರೋಫಿಯಲ್ಲಿ ಆಡಿದ್ದ ಸಮಿತ್, ಇದೀಗ ರಾಜ್ಯ ಹಿರಿಯರ ತಂಡವನ್ನೂ ಪ್ರತಿನಿಧಿಸುವ ನಿರೀಕ್ಷೆಯಲ್ಲಿದ್ದಾರೆ.
ಸದ್ಯದಲ್ಲೇ ಕೆಎಸ್‌ಸಿಎ ಅಂತಿಮ 15 ಆಟಗಾರರ ಪಟ್ಟಿ ಪ್ರಕಟ ಮಾಡಲಿದೆ. ‘ಸಿ’ ಗುಂಪಿನಲ್ಲಿರುವ ಕರ್ನಾಟಕ, ಮೊದಲ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಸೆಣಸಲಿದೆ.
ಸಂಭವನೀಯ ಆಟಗಾರರ ಪಟ್ಟಿ: ಮಯಾಂಕ್ ಅಗರ್‌ವಾಲ್, ಕೆ.ಎಲ್.ರಾಹುಲ್, ಮನೀಶ್ ಪಾಂಡೆ, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ವಿದ್ವತ್ ಕಾವೇರಪ್ಪ, ವೈಶಾಖ್ ವಿಜಯ್‌ಕುಮಾರ್, ನಿಕಿನ್ ಜೋಸ್, ಸ್ಮರಣ್ ಆರ್, ಕಿಶನ್ ಬೆಡಾರೆ, ಅನೀಶ್ ಕೆ.ವಿ., ಶರತ್ ಶ್ರೀನಿವಾಸ್, ಸುಜಯ್ ಸತೇರಿ, ಕೃತಿಕ್ ಕೃಷ್ಣ, ವಾಸುಕಿ ಕೌಶಿಕ್, ಅಭಿಲಾಷ್ ಶೆಟ್ಟಿ, ವೆಂಕಟೇಶ್ ಎಂ., ಶ್ರೇಯಸ್ ಗೋಪಾಲ್, ಹಾರ್ದಿಕ್ ರಾಜ್, ಶುಭಾಂಗ್ ಹೆಗಡೆ, ರೋಹಿತ್ ಕುಮಾರ್, ಧೀರಜ್ ಗೌಡ, ಮೊಹ್ಸಿನ್ ಖಾನ್, ಶಶಿಕುಮಾರ್ ಕೆ., ಅಧೋಕ್ಷ್, ಶಿಖರ್ ಶೆಟ್ಟಿ, ಯಶೋವರ್ಧನ್, ವಿಶಾಲ್ ಓನತ್, ಜ್ಯಾಸ್ಪರ್ ಇ.ಜೆ., ಸಮಿತ್ ದ್ರಾವಿಡ್, ಕಾರ್ತಿಕೇಯ ಕೆ.ಪಿ., ಸಮರ್ಥ್ ನಾಗರಾಜ್, ಲುವ್ನಿತ್ ಸಿಸೋಡಿಯಾ, ಚೇತನ್ ಎಲ್.ಆರ್., ಅಭಿನವ್ ಮನೋಹರ್.