ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!

| N/A | Published : Nov 08 2025, 03:15 AM IST

RCB

ಸಾರಾಂಶ

ಬ್ರಿಟನ್‌ ಮೂಲದ ಡಿಯಾಗೋ ಕಂಪನಿಯು ಐಪಿಎಲ್‌ನ ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಫ್ರಾಂಚೈಸಿಯನ್ನು ಮಾರಾಟ ಮಾಡಲು ನಿರ್ಧರಿಸಿದ ಬೆನ್ನಲ್ಲೇ ಕನ್ನಡಿಗ ಬಿಲಿಯನೇರ್‌ ಉದ್ಯಮಿಗಳು ತಂಡ ಖರೀದಿಗೆ ಮುಂದಾಗಿದ್ದಾರೆ.

ನವದೆಹಲಿ: ಬ್ರಿಟನ್‌ ಮೂಲದ ಡಿಯಾಗೋ ಕಂಪನಿಯು ಐಪಿಎಲ್‌ನ ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಫ್ರಾಂಚೈಸಿಯನ್ನು ಮಾರಾಟ ಮಾಡಲು ನಿರ್ಧರಿಸಿದ ಬೆನ್ನಲ್ಲೇ ಕನ್ನಡಿಗ ಬಿಲಿಯನೇರ್‌ ಉದ್ಯಮಿಗಳು ತಂಡ ಖರೀದಿಗೆ ಮುಂದಾಗಿದ್ದಾರೆ.

ಜೆರೋದಾ ಸಂಸ್ಥೆಯ ಸಹ ಸ್ಥಾಪಕ ನಿಖಿಲ್‌ ಕಾಮತ್‌- ಎಂಇಎಂಜಿ ಮುಖ್ಯಸ್ಥ ರಂಜನ್‌ ಪೈ

ಜೆರೋದಾ ಸಂಸ್ಥೆಯ ಸಹ ಸ್ಥಾಪಕ ನಿಖಿಲ್‌ ಕಾಮತ್‌ ಹಾಗೂ ಮಣಿಪಾಲ್‌ ಎಜುಕೇಶನ್‌ ಮತ್ತು ಮೆಡಿಕಲ್‌ ಗ್ರೂಪ್‌ (ಎಂಇಎಂಜಿ) ಮುಖ್ಯಸ್ಥ ರಂಜನ್‌ ಪೈ ಆರ್‌ಸಿಬಿ ಖರೀದಿಸಲು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಇವರ ಜತೆಗೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್ ಪೂನಾವಾಲಾ ಕೂಡ ಒಲವು ಹೊಂದಿದ್ದು, ಮೂವರನ್ನು ಒಳಗೊಂಡ ತಂಡವು ಖರೀದಿಗೆ ಬಿಡ್‌ ಸಲ್ಲಿಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

2 ಬಿಲಿಯನ್‌ ಡಾಲರ್‌ ಗೆ ಮಾರಾಟ

ಆರ್‌ಸಿಬಿಯನ್ನು ಬರೋಬ್ಬರಿ 2 ಬಿಲಿಯನ್‌ ಡಾಲರ್‌(ಅಂದಾಜು 17700 ಕೋಟಿ ರು.ಗೆ)  ಗೆ ಮಾರಾಟ ಮಾಡಲು ಡಿಯಾಜಿಯೋ ಮುಂದಾಗಿದೆ. ಫೋರ್ಬ್ಸ್ ವರದಿ ಪ್ರಕಾರ, ಪೂನಾವಾಲಾ ಮತ್ತು ಕುಟುಂಬದ ನಿವ್ವಳ ಮೌಲ್ಯ 1.7 ಲಕ್ಷ ಕೋಟಿ ಇದೆ. ಇನ್ನು ರಂಜನ್‌ ಪೈ 24000 ಕೋಟಿ, 22000 ಕೋಟಿ ನಿವ್ವಳ ಮೌಲ್ಯ ಹೊಂದಿದ್ದಾರೆ.

ಐಪಿಎಲ್ ಫ್ರಾಂಚೈಸಿಗಳ ಪೈಕಿ ಆರ್‌ಸಿಬಿಯು ಅತಿ ಹೆಚ್ಚು ಬ್ರಾಂಡ್ ಮೌಲ್ಯವನ್ನು ಹೊಂದಿದ್ದು, ಇದರ ಮೌಲ್ಯ 2300 ಕೋಟಿ ರು. ಇದೆ ವರದಿಯಾಗಿದೆ.

Read more Articles on