ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದಿನಿಂದ ರೈಲ್ವೇಸ್‌ ಸವಾಲು

| Published : Feb 02 2024, 01:08 AM IST

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದಿನಿಂದ ರೈಲ್ವೇಸ್‌ ಸವಾಲು
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 8 ಬಾರಿ ಚಾಂಪಿಯನ್‌ ಕರ್ನಾಟಕ, ಮಹತ್ವದ ಪಂದ್ಯದಲ್ಲಿ ಶುಕ್ರವಾರದಿಂದ ರೈಲ್ವೇಸ್‌ ವಿರುದ್ಧ ಸೆಣಸಾಡಲಿದೆ.

ಸೂರತ್‌: ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 8 ಬಾರಿ ಚಾಂಪಿಯನ್‌ ಕರ್ನಾಟಕ, ಮಹತ್ವದ ಪಂದ್ಯದಲ್ಲಿ ಶುಕ್ರವಾರದಿಂದ ರೈಲ್ವೇಸ್‌ ವಿರುದ್ಧ ಸೆಣಸಾಡಲಿದೆ.

ಎಲೈಟ್‌ ‘ಸಿ’ ಗುಂಪಿನಲ್ಲಿರುವ ರಾಜ್ಯ ತಂಡ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 2ರಲ್ಲಿ ಗೆದ್ದಿದ್ದು, 1 ಡ್ರಾ, 1 ಸೋಲಿನೊಂದಿಗೆ 15 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯಕ್ಕೆ ರೈಲ್ವೇಸ್‌ ಪಂದ್ಯ ಹೊರತುಪಡಿಸಿ ಇನ್ನೂ 2 ಪಂದ್ಯ ಬಾಕಿ ಇದೆ. ಸದ್ಯ ತಮಿಳುನಾಡು ಕೂಡಾ 15 ಅಂಕ ಪಡೆದಿದ್ದು, ನೆಟ್‌ ರನ್‌ರೇಟ್‌ ಆಧಾರದಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಾರ್ಟರ್‌ಗೇರಲು ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆಯಬೇಕಿದ್ದು, ಹೀಗಾಗಿ ರಾಜ್ಯಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಅತ್ತ ರೈಲ್ವೇಸ್‌ 4 ಪಂದ್ಯದಲ್ಲಿ 1ರಲ್ಲಿ ಮಾತ್ರ ಗೆದ್ದಿದ್ದು, 12 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ.ಪಂದ್ಯ: ಬೆಳಗ್ಗೆ 9.30ಕ್ಕೆ-ಮಯಾಂಕ್‌ ಗೈರುತ್ರಿಪುರಾ ವಿರುದ್ಧ ಪಂದ್ಯದ ಬಳಿಕ ವಿಮಾನದಲ್ಲಿ ದ್ರವ ಪದಾರ್ಥ ಕುಡಿದು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ನಾಯಕ ಮಯಾಂಕ್‌ ಅಗರ್‌ವಾಲ್‌ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಕಳೆದ ಪಂದ್ಯಕ್ಕೆ ಗಾಯದ ಕಾರಣಕ್ಕೆ ಗೈರಾಗಿದ್ದ ಮನೀಶ್‌ ಪಾಂಡೆ ಈ ಪಂದ್ಯದಲ್ಲಿ ಆಡುವ ನಿರೀಕ್ಷೆಯಿದೆ. ಮನೀಶ್‌ ಅಥವಾ ನಿಕಿನ್‌ ಜೋಸ್‌ ತಂಡದ ನಾಯಕತ್ವ ವಹಿಸುವ ಸಾಧ್ಯತೆಯಿದೆ.