ಕೊಹ್ಲಿ ಹಾಗೂ ರೋಹಿತ್‌   ಭವಿಷ್ಯದ ಬಗ್ಗೆ ಪದೇ ಪದೇ ಚರ್ಚೆಗಳಾಗುತ್ತಿದ್ದು, ಅವರ ನಿವೃತ್ತಿ ಬಗ್ಗೆಯೂ ಮಾತುಗಳು ಕೇಳಿಬರುತ್ತಿದೆ.  ಆದರೆ ಇದಕ್ಕೆಲ್ಲಾ ಸವಾಲೆಸೆಯುವಂತೆ ಅಮೋಘ ಪ್ರದರ್ಶನ ನೀಡುತ್ತಿರುವ ರೋಹಿತ್‌ ಹಾಗೂ ಕೊಹ್ಲಿ ಅಗ್ರ -2 ಸ್ಥಾನಗಳನ್ನು ಪಡೆಯುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ದುಬೈ: ಭಾರತದ ದಿಗ್ಗಜ ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಭವಿಷ್ಯದ ಬಗ್ಗೆ ಪದೇ ಪದೇ ಚರ್ಚೆಗಳಾಗುತ್ತಿದ್ದು, ಅವರ ನಿವೃತ್ತಿ ಬಗ್ಗೆಯೂ ಮಾತುಗಳು ಕೇಳಿಬರುತ್ತಿದೆ. 

ಅಮೋಘ ಪ್ರದರ್ಶನ ನೀಡುತ್ತಿರುವ ರೋಹಿತ್‌ ಹಾಗೂ ಕೊಹ್ಲಿ

ಆದರೆ ಇದಕ್ಕೆಲ್ಲಾ ಸವಾಲೆಸೆಯುವಂತೆ ಅಮೋಘ ಪ್ರದರ್ಶನ ನೀಡುತ್ತಿರುವ ರೋಹಿತ್‌ ಹಾಗೂ ಕೊಹ್ಲಿ, ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರ -2 ಸ್ಥಾನಗಳನ್ನು ಪಡೆಯುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ನೂತನ ರ್‍ಯಾಂಕಿಂಗ್‌ ಪಟ್ಟಿ

ಬುಧವಾರ ಪ್ರಕಟಗೊಂಡ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 38 ವರ್ಷದ ರೋಹಿತ್‌ 781 ರೇಟಿಂಗ್‌ ಅಂಕಗಳೊಂದಿಗೆ ಅಗ್ರಸ್ಥಾನ ಭದ್ರಪಡಿಸಿಕೊಂಡಿದ್ದು, 37ರ ಕೊಹ್ಲಿ 2 ಸ್ಥಾನ ಪ್ರಗತಿ ಸಾಧಿಸಿ 773 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದಾರೆ. ಶುಭ್‌ಮನ್‌ ಗಿಲ್‌ 5ನೇ ಸ್ಥಾನದಲ್ಲಿದ್ದರೆ, ಶ್ರೇಯಸ್‌ ಅಯ್ಯರ್‌ 10ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೆ.ಎಲ್‌.ರಾಹುಲ್‌ 12ನೇ ಸ್ಥಾನಕ್ಕೇರಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಕುಲ್ದೀಪ್‌ ಯಾದವ್‌ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಭಿಷೇಕ್‌ ಶರ್ಮಾ, ಬೌಲರ್‌ಗಳ ಪಟ್ಟಿಯಲ್ಲಿ ವರುಣ್‌ ಚಕ್ರವರ್ತಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.