ಸಾರಾಂಶ
ಬಾರ್ಬಡೊಸ್: ಟಿ20 ವಿಶ್ವಕಪ್ ಟ್ರೋಫಿ ಗೆಲುವಿನ ಬಳಿಕ ಭಾರತದ ನಾಯಕ ರೋಹಿತ್ ಶರ್ಮಾ ಪಿಚ್ ಮೇಲಿನ ಮಣ್ಣು ತಿಂದು ಸಂಭ್ರಮಿಸಿದರು. 24 ಗ್ರ್ಯಾನ್‌ಸ್ಲಾಂ ಟೆನಿಸ್ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್ ಜೋಕೋವಿಚ್ 2011ರಲ್ಲಿ ವಿಂಬಲ್ಡನ್ ಗೆದ್ದ ಬಳಿಕ ಸಂಭ್ರಮಾಚರಣೆ ವೇಳೆ ಅಂಗಳದ ಮಣ್ಣು ತಿಂದಿದ್ದರು. ಸದ್ಯ ಇವರಿಬ್ಬರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.ಟಿ20 ವಿಶ್ವಕಪ್ ಗೆಲುವಿನೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ ಕೋರಿದ್ದರು.
ರೋಜರ್ ಬಿನ್ನಿ ವಿಶೇಷ ಸಾಧನೆ
ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ ಭಾರತದ ಟಿ20 ವಿಶ್ವಕಪ್ ಗೆಲುವಿನೊಂದಿಗೆ ವಿಶೇಷ ಸಾಧನೆ ಮಾಡಿದ್ದಾರೆ. 1983ರಲ್ಲಿ ಭಾರತ ಏಕದಿನ ವಿಶ್ವಕಪ್ ಗೆದ್ದಾಗ ಬಿನ್ನಿ ಭಾರತ ತಂಡದಲ್ಲಿ ಪ್ರಮುಖ ಬೌಲರ್ ಆಗಿದ್ದರು. ಬಳಿಕ 2000ರಲ್ಲಿ ಅವರು ಕೋಚ್ ಆಗಿದ್ದಾಗ ಭಾರತ ಅಂಡರ್-19 ವಿಶ್ವಕಪ್ ಗೆದ್ದಿತ್ತು. 2013ರಲ್ಲಿ ಭಾರತ ಎಂ.ಎಸ್.ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಾಗ ಬಿನ್ನಿ ಆಯ್ಕೆ ಸಮಿತಿಯಲ್ಲಿದ್ದರು. ಈ ವರ್ಷ ಟಿ20 ವಿಶ್ವಕಪ್ ಗೆದ್ದಾಗ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದಾರೆ.