ಅಂಪೈರ್‌ ಜೊತೆ ವಾಗ್ವಾದ ನಡೆಸಿದ ಸ್ಯಾಮ್ಸನ್‌ ಬಿತ್ತು ಭಾರಿ ದಂಡ!

| Published : May 09 2024, 01:00 AM IST / Updated: May 09 2024, 04:32 AM IST

ಅಂಪೈರ್‌ ಜೊತೆ ವಾಗ್ವಾದ ನಡೆಸಿದ ಸ್ಯಾಮ್ಸನ್‌ ಬಿತ್ತು ಭಾರಿ ದಂಡ!
Share this Article
  • FB
  • TW
  • Linkdin
  • Email

ಸಾರಾಂಶ

ಅಂಪೈರ್‌ ಜೊತೆ ಮೈದಾನದಲ್ಲೇ ಅತೃಪ್ತಿ ವ್ಯಕ್ತಪಡಿಸಿದ್ದಕ್ಕೆ ಸಂಜು ಸ್ಯಾಮ್ಸನ್‌ಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ನಿಧಾನಗತಿ ಬೌಲಿಂಗ್‌ಗಾಗಿ ಅವರಿಗೆ ದಂಡ ವಿಧಿಸಲಾಗಿತ್ತು.

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದ ವೇಳೆ ಅಂಪೈರ್‌ ಜೊತೆ ವಾಗ್ವಾದ ನಡೆಸಿದ್ದಕ್ಕೆ ರಾಜಸ್ಥಾನ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್‌ಗೆ ಪಂದ್ಯದ ಸಂಭಾವನೆಯ ಶೇ.30ರಷ್ಟು ದಂಡ ವಿಧಿಸಲಾಗಿದೆ. 

ದಂಡಕ್ಕೆ ನಿಖರ ಕಾರಣವನ್ನು ಐಪಿಎಲ್‌ ಆಡಳಿತ ಮಂಡಳಿ ಬಹಿರಂಗಪಡಿಸಿಲ್ಲ. ಆದರೆ ವಿವಾದಿತ ರೀತಿಯಲ್ಲಿ ಔಟಾಗಿದ್ದ ಸಂಜು, ಅದರ ಬಗ್ಗೆ ಅಂಪೈರ್‌ ಜೊತೆ ಮೈದಾನದಲ್ಲೇ ಅತೃಪ್ತಿ ವ್ಯಕ್ತಪಡಿಸಿದ್ದಕ್ಕೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಪಂದ್ಯದಲ್ಲಿ ಡೆಲ್ಲಿ 20 ರನ್ ಗೆಲುವು ಸಾಧಿಸಿತ್ತು. ಕಳೆದ ತಿಂಗಳು ಗುಜರಾತ್ ವಿರುದ್ಧ ನಿಧಾನಗತಿ ಬೌಲಿಂಗ್‌ಗಾಗಿ ಸಂಜುಗೆ 12 ಲಕ್ಷ ದಂಡ ವಿಧಿಸಲಾಗಿತ್ತು.

3 ವರ್ಷಗಳ ಬಳಿಕ ನೀರಜ್‌ ಚೋಪ್ರಾ ಭಾರತದಲ್ಲಿ ಸ್ಪರ್ಧೆ

ನವದೆಹಲಿ: ಜಾವೆಲಿನ್‌ ಎಸೆತದಲ್ಲಿ ಒಲಿಂಪಿಕ್ಸ್ ಹಾಗೂ ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ 3 ವರ್ಷಗಳ ಬಳಿಕ ಭಾರತದಲ್ಲಿ ಸ್ಪರ್ಧಿಸಲಿದ್ದಾರೆ. ಅವರು ಮೇ 12ರಿಂದ 15ರ ವರೆಗೆ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರೀಯ ಫೆಡರೇಶನ್‌ ಕಪ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. 

26ರ ನೀರಜ್‌ 2021ರ ಮಾರ್ಚ್‌ನಲ್ಲಿ ಕೊನೆ ಬಾರಿ ಭಾರತದಲ್ಲಿ ಫೆಡರೇಶನ್‌ ಕಪ್‌ನಲ್ಲಿ ಸ್ಪರ್ಧಿಸಿದ್ದರು. ಆ ಬಳಿಕ ಅವರು 2021ರಲ್ಲಿ ಟೋಕಿಯೋ ಒಲಿಂಪಿಕ್ಸ್‌, 2022ರಲ್ಲಿ ಡೈಮಂಡ್‌ ಲೀಗ್, 2023ರಲ್ಲಿ ವಿಶ್ವ ಚಾಂಪಿಯನ್‌ ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಾಂಪಿಯನ್‌ ಆಗಿದ್ದಾರೆ. ಅವರ ಜೊತೆ ಕಿಶೋರ್‌ ಜೆನಾ ಕೂಡಾ ಕಣಕ್ಕಿಳಿಯಲಿದ್ದಾರೆ.