ಸಾರಾಂಶ
ನವದೆಹಲಿ: ಕುಸ್ತಿಪಟು ಸಾಗರ್ ಧನಕರ್ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ವಾರದೊಳಗೆ ಶರಣಾಗುವಂತೆ ಆದೇಶಿಸಿದೆ.2021ರ ಮೇ ತಿಂಗಳಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ನಡೆದಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿತ್ತು. ಆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಬಂಧನವಾಗಿತ್ತು. ಅಂದಿನಿಂದ ಜೈಲಿನಲ್ಲಿದ್ದ ಸುಶೀಲ್‌ಗೆ ಕಳೆದ ಮಾ.4ರಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸಾಗರ್ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ಶರಣಾಗುವಂತೆ ತಿಳಿಸಿದೆ.
5 ತಿಂಗಳು ಆಡದಿದ್ದರೂ ಏಕದಿನ ರ್‍ಯಾಂಕಿಂಗ್‌ನಲ್ಲಿ ರೋಹಿತ್ 2ನೇ ಸ್ಥಾನಕ್ಕೆ!
ದುಬೈ: ನಿವೃತ್ತಿ ಸುದ್ದಿ ಹರಿದಾಡುತ್ತಿರುವ ನಡುವೆಯೇ ಭಾರತದ ನಾಯಕ ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಬುಧವಾರ ಪ್ರಕಟಗೊಂಡ ನೂತನ ಪಟ್ಟಿಯಲ್ಲಿ ರೋಹಿತ್ 1 ಸ್ಥಾನ ಮೇಲೇರಿದರು. ವಿಂಡೀಸ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಬಾಬರ್ ಆಜಂ 3ನೇ ಸ್ಥಾನಕ್ಕೆ ಕುಸಿದ್ದಾರೆ. ಶುಭ್‌ಮನ್ ಗಿಲ್ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇವರಿಬ್ಬರೂ ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆ ಬಾರಿ ಏಕದಿನ ಪಂದ್ಯಗಳನ್ನಾಡಿದ್ದರು.ಪಟ್ಟಿಯ ಅಗ್ರ-15ರಲ್ಲಿ ಒಟ್ಟು 5 ಭಾರತೀಯ ಬ್ಯಾಟರ್‌ಗಳಿದ್ದಾರೆ. ಶ್ರೇಯಸ್ ಅಯ್ಯರ್ 8ನೇ, ಕೆ.ಎಲ್.ರಾಹುಲ್ 15ನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಕುಲ್ದೀಪ್ ಯಾದವ್ 2ನೇ, ರವೀಂದ್ರ ಜಡೇಜಾ 9ನೇ ಸ್ಥಾನದಲ್ಲಿದ್ದಾರೆ.