ಐಪಿಎಲ್‌ನಲ್ಲಿ ಚೆನ್ನಾಗಿ ಬೌಲಿಂಗ್‌ ಮಾಡಿದ್ರಷ್ಟೇ ವಿಶ್ವಕಪ್‌ಗೆ ಪಾಂಡ್ಯ ಆಯ್ಕೆ!

| Published : Apr 17 2024, 01:23 AM IST

ಐಪಿಎಲ್‌ನಲ್ಲಿ ಚೆನ್ನಾಗಿ ಬೌಲಿಂಗ್‌ ಮಾಡಿದ್ರಷ್ಟೇ ವಿಶ್ವಕಪ್‌ಗೆ ಪಾಂಡ್ಯ ಆಯ್ಕೆ!
Share this Article
  • FB
  • TW
  • Linkdin
  • Email

ಸಾರಾಂಶ

ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್‌ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿ ಕೈಗೊಂಡಿದೆ. ಶಿವಂ ದುಬೆ, ಚಹಲ್‌ ಕೂಡಾ ವಿಶ್ವಕಪ್‌ ತಂಡದ ರೇಸ್‌ನಲ್ಲಿದ್ದಾರೆ.

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಎದುರು ನೋಡುತ್ತಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ ಬೌಲಿಂಗ್‌ ಪ್ರದರ್ಶನದ ಮೇಲೆ ಅವರ ವಿಶ್ವಕಪ್‌ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ.ಕಳೆದ ವಾರ ಭಾರತದ ನಾಯಕ ರೋಹಿತ್‌ ಶರ್ಮಾ, ಕೋಚ್‌ ದ್ರಾವಿಡ್‌ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್‌ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್‌ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಸದ್ಯ ಐಪಿಎಲ್‌ನಲ್ಲಿ ಆಡಿರುವ 6 ಪಂದ್ಯಗಳ ಪೈಕಿ 4ರಲ್ಲಿ ಹಾರ್ದಿಕ್‌ 11 ಓವರ್‌ ಬೌಲ್‌ ಮಾಡಿದ್ದಾರೆ. ಆದರೆ 12ರ ಎಕಾನಮಿಯಲ್ಲಿ ರನ್‌ ಬಿಟ್ಟುಕೊಟ್ಟಿದ್ದು, ಕೇವಲ 3 ವಿಕೆಟ್‌ ಪಡೆದಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಬೌಲ್‌ ಮಾಡಿದರೆ ಅವರು ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಇದೇ ವೇಳೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಶಿವಂ ದುಬೆ, ತಾರಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ರನ್ನು ಆಯ್ಕೆ ಸಮಿತಿ ವಿಶ್ವಕಪ್‌ಗೆ ಪರಿಗಣಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.