ಸಾರಾಂಶ
ಕೊಹ್ಲಿ ಮೊದಲ 2 ಪಂದ್ಯಗಳಿಗೂ ಗೈರಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅವರು ವಿದೇಶದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಗೆ ಗೈರಾಗಿರುವ ಭಾರತದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ, ಸರಣಿ ಮುಂದಿನ 3 ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅವರು ವಿದೇಶದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಸರಣಿಯ ಕೊನೆ 3 ಪಂದ್ಯಗಳಿಗೆ ಲಭ್ಯವಿರುವ ಬಗ್ಗೆ ಕೊಹ್ಲಿ ಈ ವರೆಗೂ ಬಿಸಿಸಿಐಗೆ ಮಾಹಿತಿ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಅವರು ಸರಣಿಗೆ ಮರಳುವ ಸಾಧ್ಯತೆ ಕಡಿಮೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.ವಿರಾಟ್, ಬ್ರಾಡ್ಮನ್‌ರನ್ನು ಹಿಂದಿಕ್ಕಿದ ವಿಲಿಯಮ್ಸನ್
ಮೌಂಟ್ ಮಾಂಗನುಯಿ(ನ್ಯೂಜಿಲೆಂಡ್): ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಆಕರ್ಷಕ ಶತಕ ಸಿಡಿಸಿದ ನ್ಯೂಜಿಲೆಂಡ್‌ನ ತಾರಾ ಬ್ಯಾಟರ್ ಕೇನ್ ವಿಲಿಯಮ್ಸನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ದಿಗ್ಗಜ ಡಾನ್ ಬ್ರಾಡ್ಮನ್‌ರನ್ನು ಹಿಂದಿಕ್ಕಿದ್ದಾರೆ.97ನೇ ಟೆಸ್ಟ್ ಆಡುತ್ತಿರುವ ವಿಲಿಯಮ್ಸನ್ 30ನೇ ಶತಕ ದಾಖಲಿಸಿದರು. ಕೊಹ್ಲಿ, ಬ್ರಾಡ್ಮನ್ ತಲಾ 29 ಶತಕ ಬಾರಿಸಿದ್ದರು. ವಿಲಿಯಮ್ಸನ್ ಸದ್ಯ ಇಂಗ್ಲೆಂಡ್‌ನ ಜೋ ರೂಟ್, ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್, ವೆಸ್ಟ್‌ಇಂಡೀಸ್‌ನ ಚಂದ್ರಪಾಲ್ ದಾಖಲೆ ಸರಿಗಟ್ಟಿದ್ದಾರೆ.