ಸಾರಾಂಶ
ಚಂಡೀಗಢ: ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್‌ನ ‘ರಾಜ್ಯ ಐಕಾನ್’ ಆಗಿ ಜನಪ್ರಿಯ ಕ್ರಿಕೆಟಿಗ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಸಿಬಿನ್, 2019ರ ಲೋಕಸಭಾ ಚುನಾವಣೆ ವೇಳೆ ಶೇ.65.96ರಷ್ಟು ಮತದಾನ ದಾಖಲಾಗಿತ್ತು. ಈ ಬಾರಿ ಶೇ.70ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಗಿಲ್ ಅವರು ಮತದಾರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರೊ ಕಬಡ್ಡಿ: ಜೈಪುರ, ಪುಣೆಗೆ 16ನೇ ಗೆಲುವುಪಂಚಕುಲ: 10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿರುವ ಜೈಪುರ ಪಿಂಕ್ ಪ್ಯಾಂಥರ್ಸ್ ಹಾಗೂ ಪುಣೇರಿ ಪಲ್ಟನ್ ತಂಡಗಳು ತಲಾ 16ನೇ ಗೆಲುವು ದಾಖಲಿಸಿವೆ. ಲೀಗ್ ಹಂತದ ಕೊನೆ ಪಂದ್ಯದಲ್ಲಿ ಜೈಪುರ ತಂಡ ಸೋಮವಾರ ಗುಜರಾತ್ ಜೈಂಟ್ಸ್ ವಿರುದ್ಧ 45-36 ಅಂಕಗಳಿಂದ ಜಯಗಳಿಸಿತು. ಜೈಪುರದ ಅರ್ಜುನ್ ದೇಶ್ವಾಲ್ 13 ಅಂಕ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರೆ, ಗುಜರಾತ್‌ನ ಪರ್ತೀಕ್ ದಹಿಯಾ(14 ಅಂಕ) ಹೋರಾಟ ವ್ಯರ್ಥವಾಯಿತು. ಮತ್ತೊಂದು ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಪುಣೆ ತಂಡ 51-36 ಅಂಕಗಳಿಂದ ಜಯಭೇರಿ ಬಾರಿಸಿತು. ಪುಣೆಗೆ ಇನ್ನೊಂದು ಪಂದ್ಯ ಬಾಕಿ ಇದೆ.