ಸಾರಾಂಶ
ಮಂಡ್ಯ ನಗರದ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ವಿವಿಧ ವಯೋಮಿತಿಯಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ತರಬೇತುದಾರ ಎಂ.ಎಸ್.ಚೇತನ್ ತಿಳಿಸಿದರು.
ಮಂಡ್ಯ : ನಗರದ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ವಿವಿಧ ವಯೋಮಿತಿಯಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ತರಬೇತುದಾರ ಎಂ.ಎಸ್.ಚೇತನ್ ತಿಳಿಸಿದರು.
ಇಲ್ಲಿನ ಗಾಂಧಿ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
೧೭ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಎಸ್.ಸುಮುಖ್ ಚಾಂಪಿಯನ್ ಸ್ಥಾನ ಪಡೆದಿದ್ದರೆ, ೧೯ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಎರಡನೇ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೧೩ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಎಂ.ಎಚ್.ಯದ್ವಿತಿ, ೧೧ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಸಿ.ಚಿರಾಗ್, ಚಾಂಪಿಯನ್, ನಿಹಾರಿಕಾ ಪ್ರಥಮ ಸ್ಥಾನ ಪಡೆದಿದ್ದಾರೆ. ೭ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹೇಮಂತ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ನುಡಿದರು.
ಅಕಾಡೆಮಿಯ ಇತರೆ ವಿದ್ಯಾರ್ಥಿಗಳು ಸಹ ವಿವಿಧ ವಯೋಮಾನದ ವಿಭಾಗದಲ್ಲಿ ಬಹುಮಾನಗಳನ್ನು ಗೆದ್ದಿದ್ದಾರೆ. ೭ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕೀರ್ತನ್ ತೃತೀಯ, ಸಂಯಮ ಪಿ.ಗೌಡ ನಾಲ್ಕನೇ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಿಶೃತಗೌಡ ತೃಥೀಯ, ೯ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ನಾಲ್ಕನೇ ಸ್ಥಾನ, ಬಾಲಕರ ವಿಭಾಗದಲ್ಲಿ ಪ್ರಣಯ ಕೃಷ್ಣ ನಾಲ್ಕನೇ ಸ್ಥಾನ ಪಡೆದಿದ್ದಾರೆ ಎಂದರು.
11 ವರ್ಷದ ಬಾಲಕಿಯರ ವಿಭಾಗದಲ್ಲಿ ಸಂಜೀವಿನಿ ನಾಲ್ಕನೇ ಸ್ಥಾನ, 15 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕೌಶಲ್ ಎ.ಗೌಡ ತೃತೀಯ,7 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ವೈಭವ್ ಸುಲಾಖೆ ತೃತೀಯ, 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೌಲ್ಯ ತೃತೀಯ ಸ್ಥಾನ ಪಡೆದಿದ್ದಾರೆ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))