ಸಾರಾಂಶ
2024ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ 3 ಬಾರಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ನಾಯಕ ಹಾರ್ದಿಕ್ ಪಾಂಡ್ಯಗೆ ಬಿತ್ತು ಭಾರಿ ದಂಡ. ಮುಂದಿನ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಔಟ್.
ಮುಂಬೈ: ಶುಕ್ರವಾರ ನಡೆದ ಲಖನೌ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ₹30 ಲಕ್ಷ ದಂಡ ವಿಧಿಸಲಾಗಿದ್ದು, ಒಂದು ಪಂದ್ಯದಿಂದ ಅಮಾನತುಗೊಂಡಿದ್ದಾರೆ.
ಈ ಆವೃತ್ತಿಯಲ್ಲಿ ಮುಂಬೈನ ಪಂದ್ಯಗಳು ಮುಗಿದಿರುವ ಕಾರಣ, ಮುಂದಿನ ಆವೃತ್ತಿಯ ಐಪಿಎಲ್‌ನ ಮೊದಲ ಪಂದ್ಯದಿಂದ ಹಾರ್ದಿಕ್ ಹೊರಗುಳಿಯಲಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ 3ನೇ ಬಾರಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ಹಾರ್ದಿಕ್ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಜೊತೆಗೆ ಎಲ್ಲಾ ಆಟಗಾರರಿಗೂ ಪಂದ್ಯದ ಸಂಭಾವನೆಯ ಶೇ.50ರಷ್ಟು ಅಥವಾ ತಲಾ ₹12 ಲಕ್ಷ ದಂಡ ವಿಧಿಸಲಾಗಿದೆ.