ಸಾರಾಂಶ
ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂಧನಾ ಮದುವೆ ವಿಚಾರದಲ್ಲಿ ಎದ್ದಿದ್ದ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಸ್ಮೃತಿ ತಮ್ಮ ಬಹು ಕಾಲದ ಪ್ರಿಯಕರ, ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜತೆ ಶೀಘ್ರದಲ್ಲಿ ವಿವಾಹ ಆಗಲಿದ್ದಾರೆ.
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂಧನಾ ಮದುವೆ ವಿಚಾರದಲ್ಲಿ ಎದ್ದಿದ್ದ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಸ್ಮೃತಿ ತಮ್ಮ ಬಹು ಕಾಲದ ಪ್ರಿಯಕರ, ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜತೆ ಶೀಘ್ರದಲ್ಲಿ ವಿವಾಹ ಆಗಲಿದ್ದಾರೆ. ಅವರ ಭಾವಿ ಪತಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಸ್ಮೃತಿ- ಪಲಾಶ್ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಇದನ್ನು ನೋಡಿ ಅವರ ಅಭಿಮಾನಿಗಳು ಇಬ್ಬರೂ ಪ್ರೀತಿಯಲ್ಲಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿರಲಿಲ್ಲ. ಇತ್ತೀಚೆಗೆ ಇಂದೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪಲಾಶ್, ‘ಸ್ಮೃತಿ ಸದ್ಯದಲ್ಲೇ ಇಂದೋರ್‌ನ ಸೊಸೆ ಆಗಲಿದ್ದಾರೆ’ ಎಂದು ತಮ್ಮ ಮದುವೆ ವಿಚಾರವನ್ನು ಬಹಿರಂಗಪಡಿಸಿದ್ದಾರೆ.