ಸಾರಾಂಶ
ದುಬೈ: ಇಂಗ್ಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಪಂದ್ಯವನ್ನು ಸುಲಭ ಗೆದ್ದ ಮರುದಿನವೇ ಭಾರತ ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದು, ಎಲ್ಲಾ ಮೂರೂ ಮಾದರಿಯಲ್ಲಿ ನಂ.1 ಸ್ಥಾನದಲ್ಲಿದೆ.
ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಹಿಂದಿಕ್ಕಿರುವ ಭಾರತ, ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲೂ ಮೊದಲ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ-ನ್ಯೂಜಿಲೆಂಡ್ 2ನೇ ಟೆಸ್ಟ್‌ನ ಫಲಿತಾಂಶ ಏನೇ ಆದರೂ ಭಾರತ ಅಗ್ರಸ್ಥಾನದಲ್ಲೇ ಉಳಿಯಲಿದೆ.
ಭಾರತ ಸದ್ಯ 122 ರೇಟಿಂಗ್ ಅಂಕಗಳನ್ನು ಹೊಂದಿದ್ದು, ಆಸ್ಟ್ರೇಲಿಯಾ (117)ಗಿಂತ 5ನೇ ಅಂಕ ಮುಂದಿದೆ. 111 ಅಂಕ ಹೊಂದಿರುವ ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ.
ಏಕದಿನದಲ್ಲಿ ಭಾರತ 121 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, 118 ಅಂಕ ಹೊಂದಿರುವ ಆಸೀಸ್ 2ನೇ ಸ್ಥಾನದಲ್ಲಿದೆ.
ಟಿ20ಯಲ್ಲಿ ಭಾರತ 266 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಇಂಗ್ಲೆಂಡ್ (256) 2ನೇ ಸ್ಥಾನ ಪಡೆದಿದೆ.
ಭಾರತ 2023ರ ಸೆಪ್ಟೆಂಬರ್‌ನಿಂದ 2024ರ ಜನವರಿವರೆಗೂ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿತ್ತು. ದ.ಆಫ್ರಿಕಾದಲ್ಲಿ ಸರಣಿ ಡ್ರಾಗೊಂಡ ಬಳಿಕ 2ನೇ ಸ್ಥಾನಕ್ಕೆ ಕುಸಿದಿತ್ತು.