ಸಾರಾಂಶ
ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಈ ಸಂಬಂಧ ಇಲ್ಲಿನ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಈ ಸಂಬಂಧ ಇಲ್ಲಿನ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರ ದಾಳಿ ನಡೆದ ಮರುದಿನವೇ ಗಂಭೀರ್‌ಗೆ ಅನುಮಾನಾಸ್ಪದ ಜಿಮೇಲ್ ಖಾತೆಯಿಂದ ಬೆದರಿಕೆ ಮೇಲ್ ಬಂದಿದೆ. ಇ-ಮೇಲ್‌ನಲ್ಲಿ ‘ನಿನ್ನನ್ನು ಕೊಲ್ಲುತ್ತೇನೆ’ ಎಂದು ಬರೆದಿದ್ದು, ಮೇಲೆ ಕಳುಹಿಸಿರುವ ವ್ಯಕ್ತಿಯು ತನ್ನನ್ನು ತಾನು ‘ಐಸಿಸ್ ಕಾಶ್ಮೀರ’ ಎಂದು ಗುರುತಿಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಂಭೀರ್‌ಗೆ ಬೆದರಿಕೆ ಇ-ಮೇಲ್‌ಗಳು ಬಂದಿರುವುದು ಇದೇ ಮೊದಲಲ್ಲ. 2022ರಲ್ಲಿ ಇದೇ ರೀತಿಯ ಜೀವ ಬೆದರಿಕೆ ಸಂದೇಶಗಳು ಬಂದಿದ್ದವು. ಆಗ ಅವರ ಭದ್ರತೆಯನ್ನು ಹೆಚ್ಚಿಸಲಾಗಿತ್ತು.