ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌: 3ನೇ ಸ್ಥಾನಕ್ಕೆ ಕುಸಿದ ಭಾರತ

| Published : Feb 08 2024, 01:35 AM IST

ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌: 3ನೇ ಸ್ಥಾನಕ್ಕೆ ಕುಸಿದ ಭಾರತ
Share this Article
  • FB
  • TW
  • Linkdin
  • Email

ಸಾರಾಂಶ

ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌(ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್‌ ಅಗ್ರ ಸ್ಥಾನಕ್ಕೇರಿದ್ದು, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ.

ದುಬೈ: ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌(ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್‌ ಅಗ್ರ ಸ್ಥಾನಕ್ಕೇರಿದ್ದು, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ.ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ 281 ರನ್‌ಗಳ ಬೃಹತ್‌ ಜಯ ಸಾಧಿಸಿದ ಕಿವೀಸ್‌ ಶೇ.66.66 ಜಯದ ಪ್ರತಿಶತದೊಂದಿಗೆ ಮೊದಲ ಸ್ಥಾನಕ್ಕೇರಿದೆ. 2023-25ರ ಚಾಂಪಿಯನ್‌ಶಿಪ್‌ನಲ್ಲಿ 3 ಟೆಸ್ಟ್‌ ಆಡಿರುವ ಕಿವೀಸ್‌, 2ರಲ್ಲಿ ಗೆದ್ದು, 1ರಲ್ಲಿ ಸೋತಿದೆ. ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ನಲ್ಲಿ ಗೆದ್ದು 2ನೇ ಸ್ಥಾನಕ್ಕೆ ಏರಿದ್ದ ಭಾರತ, 52.77ರ ಗೆಲುವಿನ ಪ್ರತಿಶತದೊಂದಿಗೆ 3ನೇ ಸ್ಥಾನಕ್ಕೆ ಜಾರಿದೆ. ಆಸ್ಟ್ರೇಲಿಯಾ ಶೇ.55.00ರ ಗೆಲುವಿನ ಪ್ರತಿಶತದೊಂದಿಗೆ 2ನೇ ಸ್ಥಾನದಲ್ಲಿದೆ. ಉಳಿದಂತೆ ಬಾಂಗ್ಲಾದೇಶ, ಪಾಕಿಸ್ತಾನ ತಂಡಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ಕೂಡಾ ಭಾರತ-ಇಂಗ್ಲೆಂಡ್‌ ನಡುವೆ 3 ಟೆಸ್ಟ್‌ ಪಂದ್ಯಗಳು ಬಾಕಿಯಿದ್ದು, ಅವುಗಳ ಫಲಿತಾಂಶ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ರ್‍ಯಾಂಕಿಂಗ್‌ನ ಮೇಲೆ ಪರಿಣಾಮ ಬೀರಲಿದೆ.