11ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌ ಫುಟ್ಬಾಲ್‌ : ಬಿಎಫ್‌ಸಿಯನ್ನು ಗೆಲ್ಲಿಸಿದ ಬೆಂಗಳೂರಿನ ವಿನಿತ್‌

| Published : Sep 15 2024, 01:47 AM IST / Updated: Sep 15 2024, 04:12 AM IST

ಸಾರಾಂಶ

ಐಎಸ್‌ಎಲ್‌ ಫುಟ್ಬಾಲ್‌ ಟೂರ್ನಿಯ 11ನೇ ಆವೃತ್ತಿಯಲ್ಲಿ ಬೆಂಗಳೂರು ಎಫ್‌ಸಿ ಶುಭಾರಂಭ. ಕಂಠೀರವ ಕ್ರೀಡಾಂಗಣದಲ್ಲಿ ಈಸ್ಟ್‌ ಬೆಂಗಾಲ್‌ ತಂಡದ ವಿರುದ್ಧ ನಡೆದ ಪಂದ್ಯ.

ಬೆಂಗಳೂರು: 11ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್ಬಾಲ್‌ ಟೂರ್ನಿಯಲ್ಲಿ ಬೆಂಗಳೂರು ಎಫ್‌ಸಿ ತಂಡ ಶುಭಾರಂಭ ಮಾಡಿದೆ. ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಈಸ್ಟ್‌ ಬೆಂಗಾಲ್‌ ವಿರುದ್ಧ ಬಿಎಫ್‌ಸಿ 1-0 ಗೋಲಿನ ಗೆಲುವು ಸಾಧಿಸಿತು.

ಬೆಂಗಳೂರಿನ 19 ವರ್ಷದ ಯುವ ಆಟಗಾರ ವಿನಿತ್‌ ವೆಂಕಟೇಶ್‌ ತಮ್ಮ ಚೊಚ್ಚಲ ಪಂದ್ಯದಲ್ಲೇ ಗೋಲು ಬಾರಿಸಿ ತಂಡದ ಗೆಲುವಿಗೆ ಆಸರೆಯಾದರು. 25ನೇ ನಿಮಿಷದಲ್ಲಿ ಬಿಎಫ್‌ಸಿ ಪಂದ್ಯದ ಏಕೈಕ ಗೋಲು ದಾಖಲಿಸಿತು. ತಂಡ ತನ್ನ ಮುಂದಿನ ಪಂದ್ಯವನ್ನು ಸೆ.19ರಂದು ಹೈದ್ರಾಬಾದ್‌ ಎಫ್‌ಸಿ ವಿರುದ್ಧ ಆಡಲಿದೆ.