ಸಾರಾಂಶ
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಇನ್ನೂ 2 ಟೆಸ್ಟ್ ಪಂದ್ಯಗಳಿಗೆ ಭಾರತದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ವೈಯಕ್ತಿಕ ಕಾರಣಕ್ಕೆ ಮೊದಲ 2 ಟೆಸ್ಟ್‌ಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಅವರು ಯಾವಾಗ ತಂಡದ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.
ಹೀಗಾಗಿ ಮುಂದಿನ 2 ಪಂದ್ಯದಲ್ಲೂ ಆಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಮಾ.6ಕ್ಕೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿರುವ ಕೊನೆ ಟೆಸ್ಟ್‌ಗೆ ಅವರು ತಂಡಕ್ಕೆ ಮರಳಬಹುದು ಎಂದು ವರದಿಯಾಗಿದೆ.
ಇನ್ನು ಗಾಯದಿಂದಾಗಿ ಕಳೆದ ಪಂದ್ಯಕ್ಕೆ ಗೈರಾಗಿದ್ದ ಕೆ.ಎಲ್.ರಾಹುಲ್ ಹಾಗೂ ರವೀಂದ್ರ ಜಡೇಜಾ ಇಬ್ಬರೂ ಚೇತರಿಸಿಕೊಳ್ಳುತ್ತಿದ್ದು, ಸರಣಿಯ ಉಳಿದ ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿದೆ.
ಸಿರಾಜ್ ಕೂಡಾ ತಂಡಕ್ಕೆ ಮರಳುವ ನಿರೀಕ್ಷೆಯಿದೆ. 3ನೇ ಪಂದ್ಯ ಫೆ.15ರಿಂದ ರಾಜ್‌ಕೋಟ್‌ನಲ್ಲಿ ಆರಂಭಗೊಳ್ಳಲಿದ್ದು, ಕೆಲ ದಿನಗಳಲ್ಲೇ ತಂಡ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
)
)
;Resize=(128,128))
;Resize=(128,128))
;Resize=(128,128))
;Resize=(128,128))