ಇಸ್ರೇಲ್-ಇರಾನ್ ಘೋರ ಕದನಕ್ಕೂ ‘ಟ್ರಂಪ್ ವಿರಾಮ’ಮಧ್ಯಪ್ರಾಚ್ಯದಲ್ಲಿ ಭಾರೀ ವಿನಾಶದ ಆತಂಕ ಮೂಡಿಸಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಮಂಗಳವಾರ ತೆರೆ ಬಿದ್ದಿದೆ. ಈ ಮುಂಚೆ ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಾಗಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮದೇ ಮಧ್ಯಸ್ಥಿಕೆಯಲ್ಲಿ ಇರಾನ್-ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ, ಆದರೆ ವಾಸ್ತವವಾಗಿ ಕತಾರ್ ಕೂಡ ಮಧ್ಯಸ್ಥಿಕೆ ವಹಿಸಿ ಕದನವಿರಾಮ ಜಾರಿಗೆ ಶ್ರಮಿಸಿದ್ದಾಗಿ ಗೊತ್ತಾಗಿದೆ. ಈ ಮೂಲಕ 12 ದಿನಗಳಿಂದ ನಡೆಯುತ್ತಿದ್ದ ಸಮರಕ್ಕೆ ಕೊನೆ ಬಿದ್ದಂತಾಗಿದೆ.